ಗುರುವಾರ , ಮೇ 26, 2022
32 °C

ಮಹದೇವಯ್ಯ ಅಂತಿಮ ದರ್ಶನ ಪಡೆದ ಗಣ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ: ಮಳವಳ್ಳಿ ತಾಲ್ಲೂಕು ಕಲ್ಕುಣಿ ಗ್ರಾಮಕ್ಕೆ ಬುಧವಾರ ಸಚಿವ ರಾಮದಾಸ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಶಾಸಕ ಶ್ರೀನಿವಾಸಪ್ರಸಾದ್ ಇತರರು ಭೇಟಿ ನೀಡಿ ಬಿಜೆಪಿ ಮುಖಂಡ ಕಲ್ಕುಣಿ ಮಹದೇವಯ್ಯ ಅವರ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದರು. ಸಿ.ಎಸ್.ವಿಜಯಶಂಕರ್, ಮಾಜಿ ಸಚಿವರಾದ ಬಿ.ಸೋಮಶೇಖರ್, ಪಿ.ಎಂ.ನರೇಂದ್ರಸ್ವಾಮಿ, ಶಾಸಕ ಎಂ.ಶ್ರೀನಿವಾಸಪ್ರಸಾದ್, ಮಾಜಿ ಶಾಸಕರಾದ ಡಿ.ಸಿ.ತಮ್ಮಣ್ಣ, ಡಾ.ಕೆ.ಅನ್ನದಾನಿ, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮೈಷುಗರ್ಸ್‌ ಅಧ್ಯಕ್ಷ ನಾಗರಾಜಪ್ಪ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತಸಹಾಯಕ ಸಿದ್ದಲಿಂಗಸ್ವಾಮಿ, ಐಎಎಸ್ ಅಧಿಕಾರಿ ಕೆ.ಶಿವರಾಂ,  ಜ್ಞಾನೇಶ್ ಶಿಕ್ಷಣಸಂಸ್ಥೆ ಅಧ್ಯಕ್ಷ ಕೆಂಪರಾಜು, ಆದರ್ಶ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಮೂರ್ತಿ, ಧನಗೂರು ವೀರಸಿಂಹಾಸನ ಮಠದ ಮುಮ್ಮಡಿ ಷಡಕ್ಷರ ದೇಶೀಕೇಂದ್ರ ಸ್ವಾಮೀಜಿ, ದ್ಯಾವಪಟ್ಟಣದ ಶಾಂತಮಲ್ಲಿಕಾರ್ಜುನಸ್ವಾಮಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಡಾ.ಕಪನಿಗೌಡ, ಯುವ ಮೋರ್ಚದ ಅಧ್ಯಕ್ಷ ಎಚ್.ಆರ್.ಅಶೋಕ್‌ಕುಮಾರ್ ಹಾಗೂ ಇತರರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.ಸಂತಾಪ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಕೃಷ್ಣೇಗೌಡ, ಶಿವನಂಜು, ಮರಿಸ್ವಾಮಿ, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಎಂ.ಪಿ. ನಾಗೇಶ್, ರಾಜ್‌ಕುಮಾರ್,ಚಂದ್ರು, ರಮೇಶ್, ಮುನಿರಾಜು ಇತರರು ಸಂತಾಪ ಸೂಚಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.