ಮಹಾಂತೇಶ್ ಕೊಲೆ: ಸಿಬಿಐ ತನಿಖೆಗೆ ಆಗ್ರಹ

7

ಮಹಾಂತೇಶ್ ಕೊಲೆ: ಸಿಬಿಐ ತನಿಖೆಗೆ ಆಗ್ರಹ

Published:
Updated:

ಬೆಂಗಳೂರು:  `ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಸ್.ಪಿ.ಮಹಾಂತೇಶ್ ಅವರ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಬೇಕು~ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಅಧಿಕಾರಿಗಳು ತಮ್ಮ ಜತೆಗಾರನ ಈ ದಾರುಣವಾದ ಸಾವನ್ನು ಪ್ರತಿಭಟಿಸಬೇಕು. ಗೃಹ ಮಂತ್ರಿ ಅವರು ಇದರ  ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು~ ಎಂದರು.`ಈ ಕೊಲೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಭೂ ಮಾಫಿಯಾದವರೆ ಈ ಕೆಲಸವನ್ನು ಮಾಡಿದ್ದು ಎಂಬುದು ಮೇಲ್ನೋಟಕ್ಕೆ ಅನುಮಾನ ಬರುತ್ತದೆ. ತಪ್ಪಿತಸ್ಥರು ಯಾರೇ ಇರಲಿ ಅವರನ್ನು ಆದಷ್ಟು ಬೇಗ ಬಂಧಿಸಿ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.`ಬಿಎಚ್‌ಇಎಲ್ ಬಡಾವಣೆಯ ರೆಮ್ಕ ನೌಕರರಿಗೆ ನೀಡಲಾದ 452 ನಿವೇಶನಗಳ ಖಾತೆ ರದ್ದು  ಮಾಡಿರುವ  ಬಿಬಿಎಂಪಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಆದರೆ, ಭೂ ಮಾಫಿಯಾದವರು ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ತೊಂದರೆ ನೀಡುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು~ ಎಂದು ಮನವಿ ಮಾಡಿದರು.ನೆಮ್ಮದಿ ಕೇಂದ್ರ ನೌಕರರ ಪ್ರತಿಭಟನೆ: `ರಾಜ್ಯದಲ್ಲಿನ ನೆಮ್ಮದಿ ಕೇಂದ್ರಗಳಲ್ಲಿ 1600 ಜನ ಕೆಲಸಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ, ಈಗ ಗುತ್ತಿಗೆ ಮುಗಿದಿದೆ ಎಂದು ಕೆಲಸಗಾರರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಈಗ ಈ 1600 ಜನ ಕೆಲಸಗಾರರು ಬೀದಿ ಪಾಲಾಗುತ್ತಿದ್ದಾರೆ~ ಎಂದು ನೆಮ್ಮದಿ ಕೇಂದ್ರದ ಅಧ್ಯಕ್ಷ ಮಹಮದ್ ಹಫೀಜ್ ಹೇಳಿದರು.`ಈ ಕೆಲಸಗಾರರನ್ನು ಸದ್ಭಳಕೆ ಮಾಡಿಕೊಳ್ಳಬೇಕು ಮತ್ತು ಅವರ ಜೀವನಾಧಾರ ಕಲ್ಪಿಸಬೇಕೆಂದು ಒತ್ತಾಯಿಸಿ ಮಂಗಳವಾರ (ಮೇ 22) ರಂದು ಬನ್ನಪ್ಪ ಉದ್ಯಾನದ ಬಳಿ ಪ್ರತಿಭಟನೆ ಕೈಗೊಳ್ಳಲಾಗುವುದು~ ಎಂದರು. ಗೋಷ್ಠಿಯಲ್ಲಿ ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.ಉನ್ನತ ತನಿಖೆಗೆ ಬಿಎಸ್‌ವೈ ಆಗ್ರಹ

ಬೆಂಗಳೂರು:
`ಸಹಕಾರ ಸಂಘಗಳ ಇಲಾಖೆ ಉಪ ನಿರ್ದೇಶಕ ಎಸ್. ಪಿ.ಮಹಾಂತೇಶ ಅವರ ಹತ್ಯೆ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಮೇಲ್ನೋಟಕ್ಕೆ ಅನಿಸುತ್ತಿದೆ. ಹೀಗಾಗಿ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಸಚಿವ ಆರ್.ಅಶೋಕ ಅವರನ್ನು ಒತ್ತಾಯಿಸಿದ್ದಾರೆ.ಈ ಸಂಬಂಧ ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. `ಹತ್ಯೆ ಹಿಂದೆ ಭೂ ಮಾಫಿಯಾ ಇದೆ ಎಂಬ ವರದಿ ಪತ್ರಿಕೆಗಳಲ್ಲಿ ಬಂದಿದೆ. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು~ ಎಂದು ಅವರು ಆಗ್ರಹಪಡಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry