ಮಹಾಂತೇಶ್: ಶೀಘ್ರ ದುಷ್ಕರ್ಮಿಗಳ ಬಂಧನ

7

ಮಹಾಂತೇಶ್: ಶೀಘ್ರ ದುಷ್ಕರ್ಮಿಗಳ ಬಂಧನ

Published:
Updated:

ಬೆಂಗಳೂರು: ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ ಉಪನಿರ್ದೇಶಕ ಎಸ್.ಪಿ. ಮಹಾಂತೇಶ್ ಅವರ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಈವರೆಗೆ ಯಾವುದೇ ಆರೋಪಿಗಳನ್ನು          ಬಂಧಿಸಿಲ್ಲ.ಕಾರ್ಯಕ್ರಮವೊಂದರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು, `ಮಹಾಂತೇಶ್ ಅವರ ಕೊಲೆ ಪ್ರಕರಣದ ತನಿಖಾ ಕಾರ್ಯ ಶೇ 75ರಷ್ಟು ಪೂರ್ಣಗೊಂಡಿದ್ದು, ಕೆಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ~ ಎಂದು  ತಿಳಿಸಿದರು.ಒಂದೆರಡು ದಿನದಲ್ಲಿ ಬಂಧನ:  ತೀವ್ರ ಕುತೂಹಲ ಕೆರಳಿಸಿರುವ ಈ ಪ್ರಕರಣದ ತನಿಖೆಯ ಪ್ರಗತಿ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರ್.ಅಶೋಕ, `ಪ್ರಕರಣದ ಆರೋಪಿಗಳನ್ನು ಒಂದೆರಡು ದಿನಗಳಲ್ಲಿ ಬಂಧಿಸಲಾಗುವುದು~ ಎಂದರು. ಹಲವು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry