ಸೋಮವಾರ, ಜನವರಿ 20, 2020
27 °C

ಮಹಾದಾಯಿ: ಸರ್ವಪಕ್ಷ ಸಭೆಗೆ ಎಚ್‌ಡಿಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾದಾಯಿ ನದಿ ತಿರುವು ಯೋಜನೆಯ ವಾಸ್ತವ ಸಂಗತಿಯನ್ನು ನ್ಯಾಯಮಂಡಳಿಗೆ ತಿಳಿಸುವ ಉದ್ದೇಶದಿಂದ ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ

ಎಚ್‌.ಡಿ. ­ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.ನ್ಯಾಯಮಂಡಳಿಯ ಅಧ್ಯಕ್ಷ ಜೆ.ಎಂ.­ಪಾಂಚಾಲ್‌ ನೇತೃತ್ವದ ತಂಡ ಇದೇ 24ರವರೆಗೆ ಜಲಾನಯನ ಪ್ರದೇಶದಲ್ಲಿ ಅಧ್ಯಯನ ನಡೆಸಲಿದೆ. ತಂಡಕ್ಕೆ ವಾಸ್ತವ ಸ್ಥಿತಿಯನ್ನು ಮನ­ವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಸಿದ್ದ­ರಾಮಯ್ಯ ಅವರಿಗೆ ಪತ್ರಬರೆದಿದ್ದು, ತಂಡವನ್ನು ಭೇಟಿಯಾಗಿ ಮನವಿ ಸಲ್ಲಿಸುವ ಉದ್ದೇಶದಿಂದ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಕ್ರಿಯಿಸಿ (+)