ಶುಕ್ರವಾರ, ಮೇ 14, 2021
25 °C

ಮಹಾಪಾತ್ರ ಮೇಲೆ ಹಲ್ಲೆ ನಡೆಸಿದವರ ಬಂಧನ, ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕೋತ್ತಾ (ಐಎಎನ್‌ಎಸ್): ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅವಮಾನಕಾರಿ ವ್ಯಂಗಚಿತ್ರವನ್ನು ಪ್ರಸಾರ ಮಾಡಿದ ಆರೋಪ ಹೊತ್ತ ಜಾದವಪುರ ವಿಶ್ವವಿದ್ಯಾನಿಲಯದ ಉಪನ್ಯಾಸಕ ಅಂಬಿಷೇಕ್ ಮಹಾಪಾತ್ರ  ಅವರ ಮೇಲೆ ಹಲ್ಲೆ ನಡೆಸಿದ ತೃಣಮೂಲ ಕಾಂಗ್ರೆಸ್‌ನ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಶನಿವಾರ ಬಂಧಿಸಿದರು. ನಂತರ ಕೆಲವೇ ಗಂಟೆಗಳಲ್ಲಿ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.ಮಹಾಪಾತ್ರ ಅವರು ನೀಡಿದ ದೂರಿನ ಮೇರೆಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿತು.ಮಹಾಪಾತ್ರ ಅವರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಿ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ ಕ್ರಮವೂ ಕೂಡ ವ್ಯಾಪಕ ಖಂಡನೆಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರಾದ ಒ.ಪಿ ಮಿಶ್ರಾ ಅವರು ಇದೊಂದು ನ್ಯಾಯದ ಅಣಕು ಎಂದು ಜರಿದಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.