ಶನಿವಾರ, ಮೇ 8, 2021
27 °C

ಮಹಾರಾಷ್ಟ್ರದಲ್ಲಿ ಉತ್ತಮ ನಾಯಕರ ಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಕಳೆದ ಎರಡು ದಶಕಗಳಿಂದ ಮಹಾರಾಷ್ಟ್ರದಲ್ಲಿ ಉತ್ತಮ ರಾಜಕೀಯ ನಾಯಕರ ಕೊರತೆ ಎದುರಾಗಿದ್ದು, ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಅಂದುಕೊಂಡಿರುವುದಕ್ಕಿಂತಲೂ ಬಹಳ ಕೆಳಮಟ್ಟಕ್ಕೆ ಇಳಿದಿದೆ. ಸ್ವಲ್ಪ ಅಭಿವೃದ್ಧಿಯಾದರೂ ದೊಡ್ಡ ಗೆಲುವಿನಂತೆಯೇ ಸರಿ ಎಂಬ ವಿಷಯವನ್ನು ವಿಕಿಲೀಕ್ಸ್ ಬಹಿರಂಗಪಡಿಸಿದೆ.



 ಕಳೆದ ಹತ್ತು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಸರ್ಕಾರ ಪ್ರಮುಖ ಅಭಿವೃದ್ಧಿ ಕಾರ್ಯ ಮತ್ತು ಮೂಲಸೌಕರ್ಯ ಕಲ್ಪಿಸದೇ ಇರುವುದು ಅದರ ಅಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ ಎಂಬುದನ್ನು 2008, ನವೆಂಬರ್ 26ರಂದು ಮುಂಬೈ ದಾಳಿ ಮೊದಲ ವರ್ಷಾಚರಣೆ ಸಂದರ್ಭದಲ್ಲಿ ಇಲ್ಲಿನ ಅಮೆರಿಕ ರಾಜತಾಂತ್ರಿಕ ಕಚೇರಿ ಬರೆದಿದ್ದ ಪತ್ರವನ್ನು ವಿಕಿಲೀಕ್ಸ್ ಉಲ್ಲೇಖಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.