ಬುಧವಾರ, ನವೆಂಬರ್ 20, 2019
25 °C

ಮಹಾರಾಷ್ಟ್ರದಿಂದ ರಾಜ್ಯಕ್ಕೆ ನೀರು

Published:
Updated:

ಚಿಕ್ಕೋಡಿ: ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಿಂದ ಗುರುವಾರದಿಂದ ಪ್ರತಿ ಗಂಟೆಗೆ 500 ಕ್ಯೂಸೆಕ್‌ನಂತೆ ದೂಧಗಂಗಾ ಮೂಲಕ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ.10 ದಿನಗಳ ಕಾಲ ಒಟ್ಟು 0.75 ಟಿಎಂಸಿ ಅಡಿ ನೀರನ್ನು ರಾಜ್ಯಕ್ಕೆ ಬಿಡಲಾಗುತ್ತದೆ.ಈ ವಿಷಯವನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿ ಡಾ.ರುದ್ರೇಶ ಘಾಳಿ ಖಚಿತಪಡಿಸಿದ್ದು, ಶನಿವಾರದ ವೇಳೆಗೆ ನೀರು ಕೃಷ್ಣಾ ನದಿ ತಲುಪುವ ಸಾಧ್ಯತೆ ಇದೆ.ರಾಜ್ಯದಲ್ಲಿ ಕೃಷ್ಣಾ ನದಿ ಬತ್ತಿ ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆ ತೀವ್ರವಾದ ಕಾರಣ ಕೃಷಿಕರು ಮಹಾರಾಷ್ಟ್ರದಿಂದ ಕೃಷ್ಣೆಗೆ ತ್ವರಿತವಾಗಿ ನೀರು ಹರಿಸುವಂತೆ ಒತ್ತಾಯಿಸಿರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರು.ರಾಜ್ಯ ಸರಕಾರವು ಮಹಾರಾಷ್ಟ್ರದೊಂದಿಗೆ ಚರ್ಚೆ ನಡೆಸಿದ ಪರಿಣಾಮವಾಗಿ ಕಾಳಮ್ಮವಾಡಿ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಕೊಯ್ನೊ ಜಲಾಶಯದಿಂದ ಇದುವರೆಗೂ ನೀರು ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಮಾತುಕತೆ ನಡೆದಿದೆ ಎಂದು ಮಹಾರಾಷ್ಟ್ರದ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)