ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ಭರವಸೆ

7

ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ಭರವಸೆ

Published:
Updated:

ಶಿವಮೊಗ್ಗ: ಮಹಿಳೆಯರು ಉತ್ಪಾದಿಸಿದ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳಿಗೆ ಶಿವಮೊಗ್ಗದಲ್ಲಿ ಶಾಶ್ವತ ಮಾರುಕಟ್ಟೆ ಮಳಿಗೆ ನಿರ್ಮಿಸಲಾಗುವುದು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ಭರವಸೆ ನೀಡಿದರು.ಜನಶಿಕ್ಷಣ ಸಂಸ್ಥೆ ಗುರುವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ ವಿಶೇಷ ಘಟಕ ಯೋಜನೆಯಡಿಯಲ್ಲಿ ತರಬೇತಿ ಪಡೆದ ಫಲಾನುಭವಿಗಳಿಗೆ ಬ್ಯುಟಿಕೇರ್ ಹೇರ್ ಡ್ರೆನ್ಸಿಂಗ್ ತರಬೇತಿ ಪ್ರಮಾಣ ಪತ್ರ ಹಾಗೂ ಬ್ಯುಟಿಷಿಯನ್ ಕಿಟ್ ವಿತರಿಸಿ ಅವರು ಮಾತನಾಡಿದರು.ಸರ್ಕಾರದ ಯೋಜನೆಗಳನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಂಡಾಗ ಮಾತ್ರ ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದಲು ಸಾಧ್ಯ ಎಂದು ಪ್ರತಿಪಾದಿಸಿದ ಅವರು, ಮಹಿಳೆಯರಿಗೆ ದಿನಕ್ಕೆ 16 ಗಂಟೆ ಕೆಲಸ ಮಾಡುವ ಸಾಮರ್ಥ್ಯವಿದೆ. ಈ ಶಕ್ತಿ, ಸಾಮರ್ಥ್ಯವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು.ನಮ್ಮ ಜೀವನಕ್ಕೆ ನಾವೇ ಶಿಲ್ಪಿಗಳು. ಮಾಡುವ ಕೆಲಸದಲ್ಲಿ ನಿರ್ದಿಷ್ಟವಾದ ಗುರಿ, ಯೋಜನೆ, ಗುಣಮಟ್ಟವನ್ನು ಹೊಂದಿದ್ದರೆ ಯಶಸ್ಸು ಖಂಡಿತಾ ಸಿಗುತ್ತದೆ ಎಂದರು.ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಜನ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಎಸ್.ವೈ. ಅರುಣಾದೇವಿ ಮಾತನಾಡಿ, ನಾವು ಮಾಡುವ ದುಡಿಮೆಯಿಂದ ಮೇಲೆ ಬಂದಾಗ ಸಮಾಜದಲ್ಲಿ ನಮ್ಮ ಸ್ಥಾನಮಾನಕ್ಕೆ ಬೆಲೆ ಬರುತ್ತದೆ ಎಂದರು.ನಿಗಮದ ಆಡಳಿತಾಧಿಕಾರಿ ಗೀತಾ ಪಾಟೇಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಲಕ್ಷ್ಮೀಕಾಂತಮ್ಮ, ಅಭಿವೃದ್ಧಿ ಅಧಿಕಾರಿ ಬಸವರಾಜಪ್ಪ,  ಪದ್ಮಾ ಮತ್ತಿತರರು ಉಪಸ್ಥಿತರಿದ್ದರು. 

ಮಾನಸಾ ಪ್ರಾರ್ಥಿಸಿದರು. ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಶ್ರೀಕಾಂತ್ ಸ್ವಾಗತಿಸಿದರು. ಸಹ ಕಾರ್ಯಕ್ರಮಾಧಿಕಾರಿ ಬಿ. ಗಿರಿಜಾ ಕಾರ್ಯಕ್ರಮ ನಿರೂಪಿಸಿದರು. ಎಂ. ಸುಮನಾ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry