ಸೋಮವಾರ, ಜೂನ್ 14, 2021
21 °C

ಮಹಿಳಾ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಹೆಣ್ಣು ಭ್ರೂಣಗಳ ಹತ್ಯೆ ಸಮಾಜದಲ್ಲಿ ಹೆಚ್ಚಾಗುತ್ತಿದ್ದು ಇದನ್ನು ತಡೆಯುವಲ್ಲಿ ಪ್ರತಿಯೊಬ್ಬರ ಪಾತ್ರವು ಬಹಳ ಪ್ರಮುಖವಾದುದು~ ಎಂದು ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಸುಶೀಲಮ್ಮ ಹೇಳಿದರು.ನಗರದ ಶೇಷಾದ್ರಿಪುರ ಸಂಜೆ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, `ಪ್ರಸ್ತುತ ದಿನಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕೆ ಮೂಲ ಕಾರಣವಾಗಿರುವ ಭ್ರೂಣ ಪತ್ತೆ ಯಂತ್ರವನ್ನು ನಿಷೇಧಿಸಬೇಕು~

`ಹೆಣ್ಣು ಸಂಸಾರದ ಕಣ್ಣಾಗಿ ತನ್ನ ಕುಟುಂಬದ ಅಭಿವೃದ್ಧಿಗೆ ಶ್ರಮಿಸುತ್ತಾಳೆ.ಆದರೆ ಆಕೆಯನ್ನು ಸಮಾಜ ಕೀಳಾಗಿ ನೊಡುವ ಮನೋಭಾವವನ್ನು ಬೆಳೆಸಿಕೊಂಡಿರುವುದು ವಿಷಾದನೀಯ~ ಎಂದರು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎನ್.ಆರ್.ಪಂಡಿತರಾದ್ಯ, ಮುಖ್ಯ ಅತಿಥಿಗಳಾಗಿ ಸಹಾಯಕ ಕಾರ್ಯದರ್ಶಿಗಳಾದ ಸರೋಜ. ಕೆ.ಎಂ.ನಂಜಪ್ಪ, ಕೆ.ಎಂ.ಕೃಷ್ಣಸ್ವಾಮಿ, ಕಾಲೇಜಿನ ಆಡಳಿತ ಸಲಹಾ ಮಂಡಳಿಯ ಅಧ್ಯಕ್ಷರಾದ ಪ್ರೊ.ಸಿ.ಎಲ್. ಬಸವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.