ಶನಿವಾರ, ಮೇ 28, 2022
31 °C

ಮಹಿಳಾ ದೌರ್ಜನ್ಯ ಹೆಚ್ಚಳ: ಕಳವಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನದ ಶತಮಾನೋತ್ಸವ ಕಾರ್ಯಕ್ರಮವನ್ನು ಮಾರ್ಚ್ 8ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10.30ಕ್ಕೆ ಟೌನ್‌ಹಾಲ್ ವೃತ್ತದಿಂದ ಮೆರವಣಿಗೆ ಆರಂಭವಾಗುವುದು. 11.30ಕ್ಕೆ ಬನ್ನಪ್ಪ ಪಾರ್ಕ್‌ನಲ್ಲಿ ಸಭೆ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿ ಎಸ್. ಶೋಭಾ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಅಂದಿನ ಕಾರ್ಯಕ್ರಮದಲ್ಲಿ ಬರಹಗಾರ್ತಿ ಬಾನು ಮುಷ್ತಾಕ್, ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಮುಂತಾದವರು ಭಾಗವಹಿಸುವರು. ಸಂಜೆ 6ಕ್ಕೆ ಟೌನ್‌ಹಾಲ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇಡೀ ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ಅವರು ಮಾಹಿತಿ ನೀಡಿದರು.ಜಾಗತೀಕರಣ, ಉದಾರೀಕರಣ ನೀತಿಗಳ ಜಾರಿಯ ನಂತರ ಸಾಂಸ್ಕೃತಿಕ ಅವನತಿಯಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಆರ್ಥಿಕ ಸಂಕಷ್ಟ, ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಂತಹ ಸಮಸ್ಯೆಗಳು ಮಹಿಳೆಯರನ್ನು ಕಾಡುತ್ತಿವೆ. ಇಂಥ ಸ್ಥಿತಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನದ ಆಚರಣೆಯ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶವಿದೆ ಎಂದು ಹೇಳಿದರು.ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು. ಅಶ್ಲೀಲತೆ ತಡೆಗೆ ಕ್ರಮ ಕೈಗೊಳ್ಳಬೇಕು. ವರದಕ್ಷಿಣೆ ಸಮಸ್ಯೆ, ಬಾಲ್ಯವಿವಾಹ, ಸ್ತ್ರೀಭ್ರೂಣ ಹತ್ಯೆ ತಡೆಗಟ್ಟಬೇಕು. ಬೆಲೆ ಏರಿಕೆ, ಹಣದುಬ್ಬರ ನಿಯಂತ್ರಿಸಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ, ಉದ್ಯೋಗ ಖಾತ್ರಿಪಡಿಸಬೇಕು. ಗ್ರಾಮೀಣ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ರಾಜ್ಯದ 9 ಜಿಲ್ಲೆಗಳಲ್ಲಿ ತಮ್ಮ ಸಂಘಟನೆ ಸಮಿತಿಗಳನ್ನು ಹೊಂದಿದೆ. ಮಹಿಳೆಯರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರೌಢಶಾಲೆ, ಕಾಲೇಜು, ವಿದ್ಯಾರ್ಥಿನಿಲಯ, ಸ್ತ್ರೀಶಕ್ತಿ ಗುಂಪುಗಳು ಮುಂತಾದ ವರ್ಗದವರಿಗಾಗಿ ಹಲವು ಕಾರ್ಯಕ್ರಮ ಮಾಡಿರುವುದಾಗಿ ತಿಳಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ಸುಮಾ ವಿ. ಮಠದ್, ಭಾರತಿ, ರೂಪಾ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.