ಶನಿವಾರ, ಜೂನ್ 12, 2021
24 °C

ಮಹಿಳಾ ಪರ ಬಜೆಟ್ ಮಂಡನೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಜನಮುಖಿ ಮತ್ತು ಮಹಿಳಾ ಪರವಾಗಿ  ಇರಬೇಕೆಂದು  ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಲಕ್ಷ್ಮೀ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಪ್ರಾಧಾನ್ಯ ಕುಟುಂಬಗಳು, ಒಂಟಿ ಮಹಿಳೆಯರು, ದೌರ್ಜನ್ಯಕ್ಕೆ ತುತ್ತಾದವರು, ಎಂ.ಎಫ್.ಐ ಕಿರುಕುಳ ಮತ್ತಿತರ ಕಾರಣಗಳಿಗೆ ಆತ್ಮಹತ್ಯೆಗೆ ಒಳಗಾದ ಕುಟುಂಬಗಳಿಗೆ ವಿಶೇಷ ಬೆಂಬಲ ಯೋಜನೆಯನ್ನು ಮತ್ತು ಸಮರ್ಪಕ ಹಂಚಿಕೆಯ ಮೂಲಕ ಸಾಮಾಜಿಕ ಬದ್ಧತೆಯ ಬಜೆಟ್ ಮಂಡನೆಯಾಗಬೇಕು.ಹಸಿವು ಮತ್ತು ಅಪೌಷ್ಟಿಕತೆ ಬಗ್ಗೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು. ಅಸಂಘಟಿತ ಕಾರ್ಮಿಕರಿಗೆ 10,000 ವೇತನ ನಿಗದಿ ಪಡಿಸುವುದರ ಜೊತೆಗೆ ಮತ್ತಿತರ ಹಲವಾರು ಬೇಡಿಕೆಗಳನ್ನು ಬಜೆಟ್‌ನಲ್ಲಿ ಮಂಡಿಸಲು ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.