ಗುರುವಾರ , ಜೂನ್ 24, 2021
28 °C

ಮಹಿಳಾ ವಿ.ವಿ ಕುಲಪತಿ: ಮೂವರ ಹೆಸರು ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಜಾಪುರ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಸ್ಥಾನಕ್ಕೆ ಮೈಸೂರು ವಿಶ್ವವಿದ್ಯಾಲಯದ ಪ್ರೊ.ಪದ್ಮಾ ಶೇಖರ್, ಧಾರವಾಡ ವಿ.ವಿ. ಶೈಕ್ಷಣಿಕ ಸಿಬ್ಬಂದಿ ಕಾಲೇಜಿನ ನಿರ್ದೇಶಕಿ ಡಾ.ಮೀನಾ ಚಂದಾವರ್ಕರ್ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಪ್ರೊ.ಕಮಲಮ್ಮ ಹೆಸರನ್ನು ಶೋಧನಾ ಸಮಿತಿ ಶಿಫಾರಸು ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ಎಂ.ಕಾವೇರಿಯಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಮಿತಿಯ ಸಭೆಯಲ್ಲಿ ಮೂವರ ಹೆಸರನ್ನು ಅಂತಿಮಗೊಳಿಸಿ ಸರ್ಕಾರಕ್ಕೆ ಸಲ್ಲಿಸಿದ್ದು, ಒಂದೆರಡು ದಿನಗಳಲ್ಲಿ ನೂತನ ಕುಲಪತಿಯ ನೇಮಕವಾಗುವ ಸಾಧ್ಯತೆಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.