ಮಹಿಳಾ ವಿಶ್ವಕಪ್: ಭಾರತದ ಮೊದಲ ಎದುರಾಳಿ ವಿಂಡೀಸ್

7

ಮಹಿಳಾ ವಿಶ್ವಕಪ್: ಭಾರತದ ಮೊದಲ ಎದುರಾಳಿ ವಿಂಡೀಸ್

Published:
Updated:

ದುಬೈ (ಐಎಎನ್‌ಎಸ್): ಭಾರತ ಮಹಿಳಾ ತಂಡ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಪೈಪೋಟಿ ನಡೆಸಲಿದೆ. ಈ ಪಂದ್ಯ ಜನವರಿ 31ರಂದು ಮುಂಬೈಯ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಒಟ್ಟು ಎಂಟು ತಂಡಗಳು ಪಾಲ್ಗೊಳ್ಳಲಿರುವ ಟೂರ್ನಿಯಲ್ಲಿ ತಲಾ ನಾಲ್ಕು ತಂಡಗಳಂತೆ ಎರಡು ಗುಂಪುಗಳನ್ನು ವಿಂಗಡಿಸಲಾಗಿದೆ. ಒಟ್ಟು 25 ಪಂದ್ಯಗಳು ನಡೆಯಲಿದ್ದು, ಫೈನಲ್ ಪಂದ್ಯ ಫೆಬ್ರುವರಿ 17ರಂದು ಹೊನಲು ಬೆಳಕಿನಲ್ಲಿ ಆಯೋಜನೆಯಾಗಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಫೆಬ್ರುವರಿ 2ರಂದು ಶ್ರೀಲಂಕಾ ವಿರುದ್ಧ ಮೊದಲ ಪಂದ್ಯವನ್ನಾಡಿದರೆ, ರನ್ನರ್ ಅಪ್ ನ್ಯೂಜಿಲೆಂಡ್ ಫೆ. 1ರಂದು ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ. ವಿಶ್ವಕಪ್‌ಗೆ ಭಾರತ ಆತಿಥ್ಯ ವಹಿಸುತ್ತಿರುವುದು ಇದು ಮೂರನೇ ಸಲ.

`ಎ' ಗುಂಪಿನ ತಂಡಗಳು: ಭಾರತ, ವೆಸ್ಟ್‌ಇಂಡೀಸ್, ಶ್ರೀಲಂಕಾ ಮತ್ತು ಇಂಗ್ಲೆಂಡ್. `ಬಿ' ಗುಂಪು: ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry