ಯಲಹಂಕ: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ವಾಮಿ ವಿವೇಕಾನಂದ ಅವರ ಜಯಂತಿ ಕಾರ್ಯಕ್ರಮದ ಅಂಗವಾಗಿ ಕೊಡಿಗೇಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ರವಿ ಸ್ಪರ್ಧೆಯನ್ನು ಉದ್ಘಾಟಿಸಿದರು. ಒಟ್ಟು 200 ಮಂದಿ ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕ್ರಮವಾಗಿ ಮೊದಲ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದ ಅನ್ನಪೂರ್ಣ, ಪವಿತ್ರಾ ಹರೀಶ್ ಹಾಗೂ ತ್ರಿವೇಣಿ ಅವರಿಗೆ ರೂ. 5000, 3000 ಹಾಗೂ 2000 ಮೌಲ್ಯದ ಬೆಳ್ಳಿ ಬಟ್ಟಲನ್ನು ಬಹುಮಾನವಾಗಿ ನೀಡಲಾಯಿತು. ಅಲ್ಲದೆ ಇಪ್ಪತ್ತು ಮಂದಿಗೆ ಸಮಾಧಾನಕರ ಬಹುಮಾನ ಹಾಗೂ ಭಾಗವಹಿಸಿದ್ದ ಎಲ್ಲ ಸ್ಪರ್ಧಿಗಳಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು.

ಬಿಬಿಎಂಪಿ ಸದಸ್ಯ ಅಶ್ವಥ್ನಾರಾಯಣಗೌಡ, ಬಿಜೆಪಿ ಮುಖಂಡರಾದ ಎಲ್. ನಂಜಪ್ಪ, ನಾರಾಯಣಸ್ವಾಮಿ, ಮೋಹನ್ರಾಜ್, ನಗರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಕ್ಷೇತ್ರದ ಅಧ್ಯಕ್ಷೆ ಮಮತಾ ಸುರೇಶ್, ಕೊಡಿಗೇಹಳ್ಳಿ ವಾರ್ಡ್ ಅಧ್ಯಕ್ಷೆ ಅನುರಾಧ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.