ಮಹಿಳೆಯರಿಗೆ ರಕ್ಷಣೆ ಒದಗಿಸಲು ಒತ್ತಾಯ

7

ಮಹಿಳೆಯರಿಗೆ ರಕ್ಷಣೆ ಒದಗಿಸಲು ಒತ್ತಾಯ

Published:
Updated:

ಮಂಡ್ಯ: ಯುವತಿಯರು ಮತ್ತು ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ ಹಾಗೂ ಮಹಿಳಾ ಮುನ್ನಡೆ, ಜನವಾದಿ, ವಿವಿಧ ಮಹಿಳಾ ಸಂಘಟನೆಗಳ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.ಸರ್ಕಾರಿ ಬಸ್ ನಿಲ್ದಾಣ ಸಮೀಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆ ಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಅವರು, ಯುವತಿಯರು ಮತ್ತು ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿದರು.ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಕಾಲ ಧರಣಿ ನಡೆಸಿ, ಮನವಿ ಸಲ್ಲಿಸಿದರು. ಮಹಿಳೆಯರ ಮೇಲಿನ ಹಲ್ಲೆ, ಅತ್ಯಾ ಚಾರ, ಕಿರುಕುಳಗಳು ಹೆಚ್ಚುತ್ತಲೇ ಇವೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಗೆ ಸುರಕ್ಷತೆ ಇಲ್ಲದಂತಾಗಿದೆ. ಸರ್ಕಾರಗಳು ಮಾತ್ರ ನಿರ್ಲಕ್ಷ್ಯ ವಹಿಸಿವೆ ಎಂದು ಕಿಡಿಕಾರಿದರು.ನವದೆಹಲಿಯಲ್ಲಿ ಈಚೆಗೆ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ವನ್ನು ಉಗ್ರವಾಗಿ ಖಂಡಿಸಿದರು. `ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಆಕೆಯೇ ಕಾರಣ' ಎಂಬ ಅರ್ಥದಲ್ಲಿ ಮಾತನಾಡಿರುವ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ್ರತಿಯೊಬ್ಬ ಪ್ರಜೆಗೂ ಸುರಕ್ಷಿತ ಬದುಕನ್ನು ಸರ್ಕಾರ ಖಾತರಿ ಪಡಿಸ ಬೇಕು. ತನ್ನ ಕರ್ತವ್ಯವನ್ನು ಜವಾಬ್ದಾರಿಯಿಂದ ನಿಭಾಯಿಸುವ ಮೂಲಕ ನಾಗರಿಕ ಹಕ್ಕುಗಳನ್ನು ರಕ್ಷಿಸಬೇಕೆಂದು ಆಗ್ರಹಿಸಿದರು.ಎಸ್‌ಎಫ್‌ಐ ಮುಖಂಡರಾದ ನಂದೀಶ್, ರಾಜೇಂದ್ರಸಿಂಗ್‌ಬಾಬು, ಜಯಲಕ್ಷ್ಮಿ, ಮಹಿಳಾ ಮುನ್ನಡೆಯ ಮಲ್ಲಿಗೆ, ಕಮಲಾ, ಜೆಡಿಎಸ್ ಮಹಿಳಾ ಘಟಕ ಅಧ್ಯಕ್ಷೆ ಮಂಜುಳಾ ಉದಯ ಶಂಕರ್, ರೋಹಿಣಿ ಮಹಿಳಾ  ಮಂಡ ಳಿಯ ಸುನಂದಾ, ಸ್ಪಂದನ ಸಂಘಟನೆಯ ನಾಗರೇವಕ್ಕ, ಜನವಾದಿ ಸಂಘಟನೆಯ ಸಿ.ಕುಮಾರಿ, ಇತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry