ಬಳ್ಳಾರಿ: ಸ್ತ್ರೀಶಕ್ತಿ ಗುಂಪುಗಳ ಸದಸ್ಯೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಕಾನೂನಿನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಂ.ಬಿ. ಕುಲಕರ್ಣಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಾನೂನು ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಹಲಕುಂದಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರು ಯಾವುದೇ ಕಿರುಕುಳ, ಸಮಸ್ಯೆಯಲ್ಲೇ ಜೀವನವನ್ನು ಕಳೆಯಬಾರದು. ಮಹಿಳೆಯರಿಗಾಗಿ ಕಾನೂನು ನೆರವನ್ನು ಪ್ರಾಧಿಕಾರವು ನೀಡುತ್ತಿದೆ. ಯಾವುದೇ ಕುಂದುಕೊರತೆಗಳಿದ್ದರೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಿದರೆ ಉಚಿತ ನ್ಯಾಯ ದೊರಕುತ್ತದೆ. ಗ್ರಾಮೀಣ ಪ್ರದೇಶದ ಜನರು ಸಾಕ್ಷರರಾಗಿ ಯಾವುದೇ ವ್ಯಾಜ್ಯಗಳಿಲ್ಲದೆ ಪರಿಹರಿಸಿಕೊಳ್ಳುತ್ತಾ ಅಭಿವೃದ್ಧಿಯಾಗಬೇಕು ಎಂದು ತಿಳಿಸಿದರು.

3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎನ್.ಕೆ. ಸಾಲಮಂಟಪಿ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಕಾಲೇಜಿನ ಉಪನ್ಯಾಸಕಿ ಎಸ್. ಭಾರತಿ, ವಕೀಲರ ಸಂಘದ ಉಪಾಧ್ಯಕ್ಷ ಕೆ. ಯರೇಗೌಡ, ಕಾರ್ಯದರ್ಶಿ ವಿಜಯಲಕ್ಷ್ಮಿ, ಹಲಕುಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯರ್ರಿಸ್ವಾಮಿ, ಲಕ್ಷ್ಮಮ್ಮ ಮತ್ತಿತರರು ಉಪಸ್ಥಿತರಿದ್ದರು. ನರೇಂದ್ರಬಾಬು ಉಪನ್ಯಾಸ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.