ಸಿದ್ದಾಪುರ: `ಮಹಿಳೆಯರಿಗೆ ಮಹಿಳೆಯರೇ ಶತ್ರುವಾಗುವ ಬದಲು ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು~ ಎಂದು ರಾಜ್ಯ ಕರಕುಶಲ ಪ್ರಶಸ್ತಿ ಪುರಸ್ಕೃತೆ ಅಂಜನಾ ಭಟ್ಟ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕಿನ ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟ, ಶಿರಸಿಯ ಸದ್ಭಾವನಾ ಸೇವಾ ಸಂಸ್ಥೆ, ಪಟ್ಟಣದ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಮಹಿಳಾ ಘಟಕದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ರಾಘವೇಂದ್ರ ಮಠದ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಮಹಿಳಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

`ಮಹಿಳೆಯರು ಒಳ್ಳೆಯ ಜೀವನ ರೂಪಿಸಿಕೊಳ್ಳಲು ಸಹಕಾರ ನೀಡುವುದು ಎಲ್ಲರ ಜವಾಬ್ದಾರಿ. ಅಂತಹ ಸಂದರ್ಭದಲ್ಲಿ ಅವರಿಗೆ ಬೆಂಬಲ ನೀಡಿದರೆ ಸಿಗುವ ಆತ್ಮ ಸಂತೋಷ ದೊಡ್ಡದು. ಮಹಿಳೆಯರೂ ಕೂಡ ಬದುಕಿನಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು~ ಎಂದರು.

ಶಿರಸಿ ವಕೀಲರ ಸಂಘದ ಅಧ್ಯಕ್ಷ ಎ.ರವೀಂದ್ರನಾಥ ನಾಯ್ಕ, ಸಾಮಾಜಿಕ ಕಾರ್ಯಕರ್ತ ರಾಮನಾಥ ಕಾಮತ್, ಶಿರಸಿಯ ಖಾದಿ ಮತ್ತು ಗ್ರಾಮೋದ್ಯೋಗ ಸಹಕಾರಿ ಸಂಘದ ಅಧ್ಯಕ್ಷ ನಾಗರಾಜ ಹೆಗಡೆ ಮಾಳೇನಳ್ಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸತೀಶ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಆಕಾಶ ಕೊಂಡ್ಲಿ, ಸದಸ್ಯೆ ಭಾರತಿ ನಾಯ್ಕ ಮತ್ತು ಸಿ.ಎಸ್.ಗೌಡ ಉಪಸ್ಥಿತರಿದ್ದರು. ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶಾಂತಲಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

ನಿವೃತ್ತ ಪ್ರಾಧ್ಯಾಪಕಿ ಡಾ.ವಿಜಯನಳಿನಿ ರಮೇಶ ಮತ್ತು ಸಾವಯವ ಕೃಷಿಕ ಮಹಿಳೆ ಅಮೃತಾ ಹೆಗಡೆ ಅವರನ್ನು ಸನ್ಮಾನಿಸಲಾಯಿತು.

ಪೂರ್ಣಿಮಾ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ಜಿ.ವಿ.ಹೆಗಡೆ ಸ್ವಾಗತಿಸಿದರು. ವತ್ಸಲಾ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಶರಾವತಿ ನಿರೂಪಿಸಿದರು. ಇಡೀ ಸಭಾಂಗಣ ಮಹಿಳೆಯರಿಂದ ಕಿಕ್ಕಿರಿದು ತುಂಬಿತ್ತು. ಸಭಾಂಗಣದ ಹೊರಗೆ ಇದ್ದ ಮಹಿಳೆಯರಿಗೆ ಸ್ಥಳಾವಕಾಶ ಮಾಡಲು ಸಂಘಟಕರು ಕಷ್ಟ ಪಡಬೇಕಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.