ಮಹಿಳೆಯರ ಏಳಿಗೆಗೆ ವಿವಿಧ ಯೋಜನೆ ಜಾರಿ
ರಾಜರಾಜೇಶ್ವರಿನಗರ: ‘ಮಹಿಳೆಯರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಹೇಳಿದರು. ಉತ್ತರಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಹಾಗೂ ಸೀರೆ ವಿತರಿಸಿ ಮಾತನಾಡಿ ಅವರು, ಮಹಿಳೆಯರು ಸ್ವಾಲಂಬಿತರಾಗಬೇಕು. ಹಾಗೆಯೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಗಮನ ಹರಿಸಬೇಕು ಎಂದರು. ಪಾಲಿಕೆ ಸದಸ್ಯ ರಮೇಶ್ರಾಜು, ಹನುಮಗಿರಿ ದೇವಾಲಯಗಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆಂಜನಪ್ಪ ಇತರರು ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.