ಗುರುವಾರ , ಜೂನ್ 17, 2021
21 °C

ಮಹಿಳೆಯರ ಬೇಡಿಕೆ ಈಡೇರಿಕೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳಾ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.



  ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದ ಸಂಘಟನೆಯ ಸದಸ್ಯರು,   `ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ದೌರ್ಜನ್ಯ ಮುಕ್ತ ವಾತಾವರಣ ನಿರ್ಮಾಣ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು  ಒತ್ತಾಯಿಸಿದರು.



    `ಕಳೆದ 11 ತಿಂಗಳಿಂದ ವಿಧವಾ ವೇತನವನ್ನು ನೀಡಿಲ್ಲ. ಅಂತೆಯೇ ವೃದ್ಧರ ಮತ್ತು ಅಂಗವಿಕಲರ ಮಾಸಾಶನವನ್ನು ಸಹ ನಿಲ್ಲಿಸಲಾಗಿದೆ. ಇದರಿಂದ ವಿಧವಾ ವೇತನ ಮತ್ತು ಮಾಸಾಶನದ ಫಲಾನುಭವಿಗಳ ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ಈ ಸಂಬಂಧ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿ ಸಮಸ್ಯೆ ಸರಿಪಡಿಸುವಂತೆ ಕೋರಿದ್ದರೂ ಪ್ರಯೋಜನವಾಗಿಲ್ಲ~ ಎಂದು ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ಗೌರಮ್ಮ  ಹೇಳಿದರು.



ಪಡಿತರ ವಸ್ತುಗಳು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪಡಿತರ ಚೀಟಿ ಹೊಂದಿರುವವರಿಗೆ ಜೋಳ, ರಾಗಿ ಹಾಗೂ ತೊಗರಿ ಬೇಳೆಯನ್ನು ನೀಡಬೇಕು. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಅಂಗವಿಕಲರ ಹಾಗೂ ವೃದ್ಧರ ಮಾಸಾಶನವನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.



ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ನೀಲಾ, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಲಕ್ಷ್ಮಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.