ಸೋಮವಾರ, ಜೂನ್ 14, 2021
26 °C

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ನಗರದ ಭ್ರಮರಾಂಬ ಬಡಾವಣೆಯಲ್ಲಿರುವ ಮಲ್ಲಿಕಾ ಸ್ವಸಹಾಯ ಸಂಘದ ಪದಾಧಿಕಾರಿಗಳು ವಿಶ್ವ ಮಹಿಳಾ ದಿನವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು.ಸಂಘದ ಅಧ್ಯಕ್ಷೆ ಕಲ್ಯಾಣಿ ಮಾತನಾಡಿ, ವಿಶ್ವ ಮಹಿಳಾ ದಿನಾಚರಣೆಯನ್ನು ಎಲ್ಲ ಮಹಿಳೆಯರು ಹಬ್ಬದ ಮಾದರಿಯಲ್ಲಿ ಆಚರಣೆ ಮಾಡಬೇಕು ಎಂದರು.ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ದೊರಕಬೇಕಿದೆ. ಸರ್ಕಾರ ರಾಜಕೀಯದಲ್ಲಿ ಶೇ 33ರಷ್ಟು ಮೀಸಲಾತಿ ಸೌಲಭ್ಯ ನೀಡುತ್ತಿದೆ. ಈ ಪ್ರಮಾಣವನ್ನು ಶೇ 50ಕ್ಕೆ ಏರಿಕೆ ಮಾಡಬೇಕು. ಜತೆಗೆ, ಅರ್ಹತೆಯುಳ್ಳ ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸ್ವಾವಲಂಬಿಗಳಾಗಿ ಬದುಕಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ, ಹಿಂಸೆ ಪ್ರಕರಣಗಳ ತಡೆಗೆ ಕಾನೂನನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದ ಅವರು, ಮಹಿಳಾ ಸಂಘಗಳು ಪ್ರಬಲಗೊಳ್ಳುತ್ತಿವೆ. ಎಲ್ಲ ತಾಲ್ಲೂಕು ಹಾಗೂ ಹೋಬಳಿ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್‌ಗಳನ್ನು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಸುಮತಿ, ಸದಸ್ಯರಾದ ಶಶಿಕಲಾ, ಶಶಿರೇಖಾ, ಲೀಲಾವತಿ, ಶಿಲ್ಪಾ, ಗಾಯತ್ರಿ, ರಾಜಮ್ಮ, ನಾಗಲಕ್ಷ್ಮೀ, ಲೀಲಾವತಿ, ನಾಗರತ್ನಾ, ಭಾಗ್ಯಾ ರಾಜ್, ವೀಣಾ ರಾಜ್, ಧನಲಕ್ಷ್ಮೀ, ಮಂಗಳಾ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.