ಗುರುವಾರ , ಜೂನ್ 24, 2021
29 °C

ಮಹಿಳೆಯರ ಮೇಲೆ ದೌರ್ಜನ್ಯ: ಚಿಂತನೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹಿಳೆಯರ ಮೇಲೆ ದೌರ್ಜನ್ಯ: ಚಿಂತನೆ ಅಗತ್ಯ

ಕಂಪ್ಲಿ: ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಶೋಷಣೆ, ವರದಕ್ಷಿಣೆ ಕಿರುಕುಳದಂಥ ಪ್ರಕರಣಗಳು ದೇಶದಲ್ಲಿ ಇಂದಿಗೂ ಜೀವಂತವಾಗಿವೆ. ಈ ಬಗ್ಗೆ ಗಂಭೀರ ಚಿಂತನೆ ಅಗತ್ಯ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಕು. ಭಾರತೀಜಿ ಹೇಳಿದರು.ಸ್ಥಳೀಯ ವಾಸವಿ ಕಲ್ಯಾಣ ಮಂಟಪದಲ್ಲಿ ಪುರಸಭೆ ಸ್ವರ್ಣ ಜಯಂತಿ ಶಹರಿ ರೋಜಗಾರ್ ಯೋಜನಾ ಘಟಕ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರ ಸಾಕ್ಷರತಾ ಪ್ರಮಾಣ ಇನ್ನೂ ಅಧಿಕವಾದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಬಹುದು ಎಂದು  ಅಭಿಪ್ರಾಯಪಟ್ಟರು.ಹೊಸಪೇಟೆ ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಸಂಗೀತ ಗಾಂವಕರ್ ಮಾತನಾಡಿ, ಭ್ರೂಣ ಹತ್ಯೆಯಿಂದ ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುತ್ತಿದ್ದು, ಇದು ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದರು. ಮಹಿಳಾ ಸಬಲೀಕರಣ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಬೇಕಿದೆ. ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಅರಿತು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.ಹೊಸಪೇಟೆ ಉಚಿತ ಕಾನೂನು ಸಲಹಾ ಕೇಂದ್ರದ ವಕೀಲರಾದ ಸುನಂದ ಮಾತನಾಡಿ, ಆಸ್ತಿ ಕಾನೂನನ್ನು ಮಹಿಳೆಯರು ದುರುಪಯೋಗಪಡಿಸಿಕೊಳ್ಳಬಾರದು. ಕಾನೂನಿನ ಬಳಕೆ ಕೌಟುಂಬಿಕ ಸಾಮರಸ್ಯವನ್ನು ಹದಗೆಡಿಸಬಾರದು. ವರದಕ್ಷಿಣೆ, ವಿಚ್ಛೇದನ, ಮಹಿಳಾ ಕಾನೂನು ಕುರಿತು ವಿವರಿಸಿದರು.ಪುರಸಭೆ ಅಧ್ಯಕ್ಷೆ ಹೇಮಾವತಿ ಎಚ್. ಪೂರ್ಣಚಂದ್ರ  ಕಾರ್ಯಕ್ರಮ ಉದ್ಘಾಟಿಸಿದರು.  ಪುರಸಭೆ ಸ್ವರ್ಣ ಜಯಂತಿ ಶಹರಿ ರೋಜಗಾರ್ ಯೋಜನಾ ಸಮುದಾಯ ಸಂಘಟಕಿ ವಸಂತಮ್ಮ, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು, ಮಹಿಳಾ ಸಂಘಟನಾ ಪದಾಧಿಕಾರಿಗಳು ಹಾಜರಿದ್ದರು.ಸಮುದಾಯ ಸಂಘಟಕ ವೇದಮೂರ್ತಿ ಸ್ವಾಗತಿಸಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.