ಭಾನುವಾರ, ಮೇ 9, 2021
25 °C

ಮಹಿಳೆಯರ ವಿರುದ್ಧ ಹೆಚ್ಚಿದ ಅಪರಾಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಕೆಟ್ಟ ಕಾರಣಗಳಿಂದ ಪಶ್ಚಿಮ ಬಂಗಾಳ ಮತ್ತೊಮ್ಮೆ ಸುದ್ದಿಯಲ್ಲಿದೆ.2012ನೇ ಸಾಲಿನಲ್ಲಿ ಮಹಿಳೆಯರ ವಿರುದ್ಧ ಅತಿ ಹೆಚ್ಚು ಅಪರಾಧ ಪ್ರಕರಣಗಳು ಪಶ್ಚಿಮ ಬಂಗಾಳದಲ್ಲಿ ನಡೆದಿವೆ. ಮಹಿಳೆಯರ ವಿರುದ್ಧದ ಅಪರಾಧಕ್ಕೆ ಸಂಬಂಧಿಸಿದ ಒಟ್ಟು 30,942 ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಮಹಿಳೆಯರ ವಿರುದ್ಧ ನಡೆದ ಒಟ್ಟು ಅಪರಾಧ ಪ್ರಕರಣಗಳಲ್ಲಿ ಶೇ 12.67ರಷ್ಟು ಪಶ್ಚಿಮ ಬಂಗಾಳ ರಾಜ್ಯ ಒಂದರಲ್ಲೇ ಜರುಗಿವೆ ಎಂಬ ಸುದ್ದಿಯನ್ನು ರಾಷ್ಟ್ರೀಯ ಅಪರಾಧ ಸಂಗ್ರಹ ಕೇಂದ್ರ ಹೊರಗೆಡವಿದೆ.ಮಹಿಳೆಯರ ವಿರುದ್ಧದ ಅತಿಹೆಚ್ಚು ಅಪರಾಧ ಪ್ರಕರಣ ದಾಖಲಾಗಿರುವ 2ನೇ ರಾಜ್ಯ ಆಂಧ್ರ ಪ್ರದೇಶವಾಗಿದೆ. ಉತ್ತರ ಪ್ರದೇಶ 3ನೇ ಸ್ಥಾನದಲ್ಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.