ಲಿಂಗಸುಗೂರ(ಮುದಗಲ್ಲ): ಹೆಣ್ಣು ಮಕ್ಕಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಆಗುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶೇಷ ಯೋಜನೆಗಳನ್ನು ಜಾರಿಗೆ ತಂದಿವೆ. ಆ ಪೈಕಿ ಹೆಣ್ಣು ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (ಎನ್ಪಿಇಜಿಇಎಲ್) ಜಾರಿಗೆ ತರಲಾಗಿದೆ.

ಮಹಿಳೆಯರ ಸಬಲೀಕರಣಕ್ಕೆ ವೃತ್ತಿ ಕೌಶಲತೆಯ ಉಪ ಚಟುವಟಿಕೆಗಳು ಅವಶ್ಯವಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್. ಪೊಲೀಸ್ ಪಾಟೀಲ ಹೇಳಿದರು.

ಮುದಗಲ್ಲ ಪಟ್ಟಣದ ಕೇಂದ್ರ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಎನ್ಪಿಇಜಿಇಎಲ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿರುಪಮ್ಮ ದೇಸಾಯಿ ಉದ್ಘಾಟಿಸಿದರು.

ಶಾಲಾ ಸುಧಾರಣ ಸಮಿತಿ ಅಧ್ಯಕ್ಷ ರಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಮಣ್ಣ ಹಿರೇಮನಿ, ಸದಸ್ಯ ಜೊಷೇಫ್ ಈರ್ಲಾ. ಕ್ಷೇತ್ರ ಸಮನ್ವಯಾಧಿಕಾರಿ ವೆಂಕಟೇಶ ಗುಡಾಳ, ಬಿಆರ್ಪಿ ನಾಗನಗೌಡ, ಶಿಕ್ಷಣ ಸಂಯೋಜಕರಾದ ಮಹಾಮುನಿಯಪ್ಪ, ಮಹಾಂತೇಶ ಇದ್ದಲಗಿ, ಸಿಆರ್ಪಿ ಯಮನಪ್ಪ. ಮುಖ್ಯೋಪಾಧ್ಯಾಯ ಶಿವಯೋಗಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.