ಶುಕ್ರವಾರ, ಮೇ 27, 2022
23 °C

ಮಹಿಳೆಯರ ಸಬಲೀಕರಣದಿಂದ ಸಮಾಜ ಅಭಿವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪುರ: `ಮಹಿಳೆಯರ ಸಬಲೀಕರಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಈ ಹಿನ್ನೆಲೆಯಲ್ಲಿ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು~ ಎಂದು ಪಾಲಿಕೆ ಸದಸ್ಯ ಎನ್.ವೀರಣ್ಣ ಕರೆ ನೀಡಿದರು. ಬಿಬಿಎಂಪಿ ವತಿಯಿಂದ ತೆರೆದಿರುವ ಮಹಿಳೆಯರ ನೂತನ ಹೊಲಿಗೆ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ 198 ವಾರ್ಡ್‌ಗಳಲ್ಲಿಯೂ ಕಡ್ಡಾಯವಾಗಿ ತರಬೇತಿ ಕೇಂದ್ರ ತೆರೆಯಲು ಪಾಲಿಕೆ ಉದ್ದೇಶಿಸಿದೆ. ಸದ್ಯಕ್ಕೆ ಕೇಂದ್ರದಲ್ಲಿ 30 ಹೊಲಿಗೆ ಯಂತ್ರಗಳಿವೆ. ತರಬೇತಿ ನಂತರ ಒಂದು ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುತ್ತಿದೆ. ಮಹಿಳೆಯರು ಮನೆಯಲ್ಲಿಯೇ ಕಸುಬು ಮುಂದುವರೆಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಸಲಹೆ ಮಾಡಿದರು.ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ್, ಆರೋಗ್ಯ ನಿರೀಕ್ಷಕ ಮುಕುಂದ, ವಾರ್ಡ್ ಅಧ್ಯಕ್ಷ ಮಂಜುನಾಥರೆಡ್ಡಿ, ಮುಖಂಡ ವೆಂಕಟೇಶಶೆಟ್ಟಿ, ಉಮಾಶಂಕರ್ ಆರಾಧ್ಯ, ಸುಬ್ರಮಣಿ, ಶ್ರೀನಿವಾಸ್, ಸರಸ್ವತಿ, ವಿಜಯಮ್ಮ, ರಾಣಿ, ತರಬೇತಿ ಶಿಕ್ಷಕಿ ಜಯಂತಿ ಮತ್ತಿತರರು ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.