ಮಡಿಕೇರಿ:  ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಗುರಿಯಾಗಿರುವ ಕೊಡಗಿನ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಚಂದ್ರೇಗೌಡ ಅವರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ವಿಭಾಗದಿಂದಲೇ ವರ್ಗಾವಣೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಎಂ.ವಿ.ಜಯಂತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿ ನೀಡಿದ್ದ ದೂರಿನ ಮೇರೆಗೆ ಮರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸರ್ಕಾರ ನೀಡಿದ್ದ ನಿರ್ದೇಶನದ ಮೇರೆಗೆ ಪ್ರಾದೇಶಿಕ ಆಯುಕ್ತರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಿಗೆ ಸಲ್ಲಿಸಿರುವ ವರದಿಯ ಪ್ರತಿಯನ್ನು ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾವೇರಿ ಸೇನೆಯ ಜಿಲ್ಲಾ ಸಂಚಾಲಕ ಕೆ.ಎಂ.ರವಿಚಂಗಪ್ಪ ಬಿಡುಗಡೆ ಮಾಡಿದರು.

2010ರ ಜನವರಿ 23ರಂದು ಗಣರಾಜ್ಯೋತ್ಸವ ಪಥ ಸಂಚಲನದ ಪೂರ್ವ ತಯಾರಿ ಮುಗಿದ ನಂತರ ತನ್ನ ಮಗನೊಂದಿಗೆ ಹೆಚ್ಚುವರಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ್ದಾಗ ಮಗನನ್ನು ಹೊರಗೆ ಕಳಿಸಿ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಾವೇರಿಸೇನೆ, ಸಾರ್ವಜನಿಕ ಹಿತರಕ್ಷಣಾ ಸಮಿತಿ ಹೆಚ್ಚುವರಿ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದವು.

ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು, ‘ಕೆ.ಎಂ.ಚಂದ್ರೇಗೌಡ ಅವರು ಈಗಿರುವ ಸ್ಥಳದಲ್ಲಿಯೇ ಮುಂದುವರೆದಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುವ ಸಾಧ್ಯತೆಯಿದೆ. ಅಲ್ಲದೆ, ಜಿಲ್ಲಾ ದಂಡಾಧಿಕಾರಿಗಳ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳೇ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಅಧಿಕಾರಿಯನ್ನು ಮೈಸೂರು ವಿಭಾಗದಿಂದಲೇ ವರ್ಗಾಯಿಸುವುದು ಸೂಕ್ತ’ ಎಂದು ಸರ್ಕಾರಕ್ಕೆ ಸಲ್ಲಿಸಿರುವ 30 ಪುಟಗಳ ವರದಿಯಲ್ಲಿ ಶಿಫಾರಸು ಮಾಡಿದ್ದಾರೆ.

ಈ ಮಧ್ಯೆ, ದೂರುದಾರರು, ಸಂಘಟನೆಗಳು, ಜಿಲ್ಲಾಧಿಕಾರಿಗಳ ಕಚೇರಿಯ ಮಹಿಳಾ ಸಿಬ್ಬಂದಿ ಹಾಗೂ ಆಪಾದಿತ ಅಧಿಕಾರಿಯ ಹೇಳಿಕೆಗಳನ್ನು ಪರಿಶೀಲಿಸಿರುವ ಪ್ರಾದೇಶಿಕ ಆಯುಕ್ತರು, ‘ಆಪಾದಿತ ಅಧಿಕಾರಿ ಮಹಿಳೆಗೆ ಮಾನಸಿಕವಾಗಿ ತೊಂದರೆ ನೀಡಿದ ಕುರಿತು ಹಾಗೂ ದೂರವಾಣಿ ಮೂಲಕ ಇಲ್ಲ-ಸಲ್ಲದ ಮಾತುಗಳನ್ನಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ವಿಚಾರಣಾ ಸಮಯದಲ್ಲಿ ಯಾರು ಕೂಡ ಪೂರಕ ದಾಖಲೆಗಳನ್ನು ಹಾಜರುಪಡಿಸಿಲ್ಲ. ಅಲ್ಲದೆ, ಘಟನೆ ನಡೆದ ದಿನದಂದು ಕೇಂದ್ರ ಸ್ಥಾನದಲ್ಲಿಯೇ ಇರಲಿಲ್ಲ ಎಂಬುದಕ್ಕೆ ಅಧಿಕಾರಿ ಪ್ರಯಾಣ ಭತ್ಯೆ ಬಿಲ್ ಸಲ್ಲಿಸಿದ್ದಾರೆ. 23ರಂದು ಘಟನೆ ನಡೆದಿದ್ದು, 22ರಂದೇ ಚಂದ್ರೇಗೌಡರಿಗೆ ಕೇಂದ್ರ ಸ್ಥಾನ ಬಿಡಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿರುವುದು ದೃಢಪಟ್ಟಿದೆ. ಪ್ರಯಾಣ ಭತ್ಯೆ ಬಿಲ್ನ ಮೇಲೆ ಹೆಚ್ಚುವರಿ ಜಿಲ್ಲಾಧಿಕಾರಿಗಳು 2010ರ ಮಾರ್ಚ್ 31ರಂದು ಸಹಿ ಮಾಡಿದ್ದು, ಜಿಲ್ಲಾಧಿಕಾರಿಗಳು ಕೂಡ ಮೇಲು ಸಹಿ ಮಾಡಿರುವುದನ್ನು ಪ್ರಾದೇಶಿಕ ಆಯುಕ್ತರು ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿಗಳಿಂದ ನಿಜವಾಗಿಯೂ ಮಹಿಳೆಗೆ ತೊಂದರೆಯಾಗಿದೆಯೇ ಎಂಬ ಕುರಿತು ಪೊಲೀಸ್ ಇಲಾಖೆಯಿಂದ ಹೆಚ್ಚಿನ ತನಿಖೆ ನಡೆಸುವುದು ಸೂಕ್ತ ಎಂದೂ ಪ್ರಾದೇಶಿಕ ಆಯುಕ್ತರು ವರದಿಯಲ್ಲಿ ಸಲಹೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.