ಮಂಗಳವಾರ, ಜೂನ್ 22, 2021
28 °C

ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗಾಗಿ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರದ ವೆಚ್ಚವನ್ನು ಬರುವ ಏಪ್ರಿಲ್‌ನಿಂದ ಶೇ 15ರಷ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ರಾಷ್ಟ್ರೀಯ ಪಿಂಚಣಿ ಪದ್ಧತಿ (ಎನ್‌ಪಿಎಸ್- ಲೈಟ್) ಯೋಜನೆಯ ವ್ಯಾಪ್ತಿಯಲ್ಲಿ ಇರುವ ಒಂದು ಲಕ್ಷಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರಿಗೆ ಹೆಚ್ಚಿನ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ 16.5 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ. 
ಬಾಲ ಭವನದ ಕಾರ್ಯ ಚಟುವಟಿಕೆಗಳಿಗೆ ನೀಡುತ್ತಿದ್ದ ಅನುದಾನವನ್ನು 5ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಅದರಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮೂರು ಕೋಟಿ ಮೀಸಲು ಇರಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಪೋಷಣೆ ಮಾಡುತ್ತಿರುವ ಬೆಂಗಳೂರಿನ ಸುಮಂಗಲಿ ಸೇವಾಶ್ರಮಕ್ಕೆ 50 ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ.ಸ್ತ್ರೀ ಶಕ್ತಿ ಗುಂಪುಗಳು ತಮ್ಮ ಉತ್ಪನ್ನ ಮಾರಾಟ ಮಾಡಲು ಸಂಚಾರಿ ವ್ಯಾನ್ ಸೌಲಭ್ಯಕ್ಕೆ ಸರ್ಕಾರ ಮುಂದಾಗಿದೆ. ಇದರ ಜೊತೆಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಆರಂಭಿಸಲು ಸರ್ಕಾರ ಚಿಂತಿಸಿದೆ.ಸಾಮಾಜಿಕ ಭದ್ರತಾ ವೇತನ

* 65ರಿಂದ 80 ವರ್ಷ ವಯಸ್ಸಿನ ಅರ್ಹ ವ್ಯಕ್ತಿಗಳಿಗೆ ನೀಡಲಾಗುವ ಸಾಮಾಜಿಕ ಭದ್ರತಾ ವೇತನ ರೂ 500 ಕ್ಕೆ ಹೆಚ್ಚಿಸಲಾಗಿದೆ. ಇದು ಸುಮಾರು 30 ಲಕ್ಷ ಫಲಾನುಭವಿಗಳಿಗೆ ಅನುಕೂಲ ಆಗಲಿದೆ. ಇದಕ್ಕಾಗಿ 2,310 ರೂಪಾಯಿ ಮೀಸಲು ಇರಿಸಲಾಗಿದೆ.ಅಲ್ಪಸಂಖ್ಯಾತರ ಅಭಿವೃದ್ಧಿ

*  ಅಲ್ಪಸಂಖ್ಯಾತರ ಕಲ್ಯಾಣ ಚಟುವಟಿಕೆಗಳಿಗೆ  235 ಕೋಟಿ.* ಕ್ರೈಸ್ತ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ 50 ಕೋಟಿ.* ಅಲ್ಪಸಂಖ್ಯಾತರ ಯಾತ್ರಾ ಸ್ಥಳಗಳ ಮೂಲಸೌಕರ್ಯಕ್ಕಾಗಿ 5 ಕೋಟಿ ಅನುದಾನ.* ಹಜ್ ಘರ್ ನಿರ್ಮಾಣಕ್ಕೆ 10 ಕೋಟಿ*  ಶಾದಿ ಮಹಲ್ ಮತ್ತು ಸಮುದಾಯ ಭವನಗಳಿಗೆ 15 ಕೋಟಿ* ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡಕ್ಕೆ 55 ಕೋಟಿ* ಕೌಶಲ್ಯ ಅಭಿವೃದ್ಧಿಗೆ 10 ಕೋಟಿನ್ಯಾಯಾಂಗ ಮೂಲಸೌಕರ್ಯ* ನ್ಯಾಯಾಂಗದ ಮೂಲಸೌಕರ್ಯಕ್ಕೆ 155 ಕೋಟಿ ರೂಪಾಯಿ.ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 43 ನೂತನ ನ್ಯಾಯಾಲಯ ಕಟ್ಟಡ ಹಾಗೂ  ನ್ಯಾಯಾಂಗ ಅಧಿಕಾರಿಗಳಿಗೆ 193 ವಸತಿ ಗೃಹಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇವುಗಳಿಗಾಗಿ 280 ಕೋಟಿ ರೂಪಾಯಿಗಳನ್ನು ಮೀಸಲು ಇರಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.