ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

7

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Published:
Updated:

ಅಗರ್ತಲ (ಐಎಎನ್‌ಎಸ್): ದುಷ್ಕರ್ಮಿಗಳ ಗುಂಪೊಂದು ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿಹಾಕಿರುವ ದಾರುಣ ಘಟನೆ ಪಶ್ಚಿಮ ತ್ರಿಪುರಾದ ಬಿಸ್ಲಾಗಾರದಲ್ಲಿ ನಡೆದಿದೆ.ಘಟನೆ ವಿವರ: ಕಳೆದ ಬುಧವಾರ ರಾತ್ರಿ ಮಹಿಳೆಯನ್ನು ಆಕೆಯನ್ನು ಮನೆಯಿಂದ ಹೊರಗೆಳೆದು ತಂದ ದುಷ್ಕರ್ಮಿಗಳು ಸಾರ್ವಜನಿಕರ ಎದುರು ಅತ್ಯಾಚಾರ ಮಾಡಿ ನಂತರ ಆಕೆಯನ್ನು ಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಹಲ್ಲೆ ಮಾಡಿ ಪರಾರಿ ಆಗಿದ್ದಾರೆ ಎಂದು ಪೊಲೀಸರು ಘಟನೆಯ ಬಗ್ಗೆ ತಿಳಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ನೀಡಿದ್ದ ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.ಈ ಪ್ರಕರಣದಲ್ಲಿ ಆಕೆಯ ಪತಿ ವರ್ತನೆಯನ್ನು ಸಹ ತನಿಖೆಗೆ ಒಳಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry