ಮಂಗಳವಾರ, ಜೂನ್ 15, 2021
25 °C

ಮಹಿಳೆ ಸೇರಿ ಇಬ್ಬರ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್ ಮತ್ತು ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿದಂತೆ ಇಬ್ಬರನ್ನು ಕೊಲೆ ಮಾಡಲಾಗಿದೆ.ಆಟೊ ಚಾಲಕನೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಲಗ್ಗೆರೆ ಸಮೀಪದ ಅಂಬೇಡ್ಕರ್ ಕಾಲೊನಿಯಲ್ಲಿ ನಡೆದಿದೆ. ಸಿದ್ಧ ಉಡುಪು ಕಾರ್ಖಾನೆ ಉದ್ಯೋಗಿ ಶ್ರೀಕನ್ಯಾ (26) ಕೊಲೆಯಾದವರು. ಅವರ ಪತಿ ಆರೋಪಿ ನಾಗರಾಜ್ (32) ಅವರನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.ಪತ್ನಿಯ ಶೀಲದ ಬಗ್ಗೆ ಶಂಕೆ ಹೊಂದಿದ್ದ ಆರೋಪಿ ಅವರ ಜತೆ ಆಗಾಗ್ಗೆ ಜಗಳವಾಡುತ್ತಿದ್ದ. ಅಂತೆಯೇ ರಾತ್ರಿಯೂ ಪತ್ನಿ ಜತೆ ಜಗಳವಾಡಿದ ಆತ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶ್ರೀಕನ್ಯಾ ಅವರ ವಿವಾಹವಾಗಿ 6ವರ್ಷವಾಗಿದ್ದು, ಅವರಿಗೆ 4 ವರ್ಷದ ಮಗಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಮತ್ತೊಂದು ಪ್ರಕರಣ: 
ಜರಗನಹಳ್ಳಿ ಬಸ್ ನಿಲ್ದಾಣದ ಬಳಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.ಕೊಲೆಯಾದ ವ್ಯಕ್ತಿಯ ವಯಸ್ಸು ಸುಮಾರು 35 ವರ್ಷ. ಅವರ ಗುರುತು ಪತ್ತೆಯಾಗಿಲ್ಲ ಮತ್ತು ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕುಮಾರಸ್ವಾಮಿಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.