ಮಂಗಳವಾರ, ಏಪ್ರಿಲ್ 20, 2021
32 °C

ಮಾಂಸಕ್ಕಾಗಿ ಕಾಡೆಮ್ಮೆ ಬೇಟೆ: ಆರೋಪಿ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಂಸಕ್ಕಾಗಿ ಕಾಡೆಮ್ಮೆ ಬೇಟೆ: ಆರೋಪಿ ಸೆರೆ

ಚಾಮರಾಜನಗರ: ಮಾಂಸಕ್ಕಾಗಿ ಕಾಡೆಮ್ಮೆಯನ್ನು ಬೇಟೆಯಾಡಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದ ನಂಜುಂಡಯ್ಯ ಬಂಧಿತ. ಬಿಳಿಗಿರಿರಂಗನಾಥಸ್ವಾಮಿ ಹುಲಿ ರಕ್ಷಿತಾರಣ್ಯ(ಬಿಆರ್‌ಟಿ)ದ ವ್ಯಾಪ್ತಿಯ ಅಟ್ಟುಗುಳಿಪುರದ ಉಪ್ಪಳ ಪ್ರದೇಶದ ಬಳಿ ಕಾಡೆಮ್ಮೆಯನ್ನು ಕೊಂದು ಮಾಂಸವನ್ನು ಹಂಚಿಕೊಳ್ಳುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಳಿದ ನಾಲ್ವರು ಆರೋಪಿಗಳು ನಾಪತ್ತೆಯಾಗಿದ್ದಾರೆ.ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ನಾಗರಾಜು ಹಾಗೂ ವಲಯ ಅರಣ್ಯ ಅಧಿಕಾರಿ ಎ.ಖಾನ್ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾದ ಎಸ್.ಲೋಹಿತ್, ರವಿ, ಬಿ.ಮಾಲಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.`ಆರೋಪಿಯ ವಿಚಾರಣೆ ವೇಳೆ ಮಾಂಸಕ್ಕಾಗಿ ಕಾಡೆಮ್ಮೆ ಬೇಟೆ ಯಾಡಿರುವ ಅಂಶ ತಿಳಿದುಬಂದಿದೆ. ತನಿಖೆ ಮುಂದುವರಿದಿದ್ದು, ಶೀಘ್ರವೇ ಇನ್ನುಳಿದ ಆರೋಪಿಗಳನ್ನು  ಬಂಧಿಸ ಲಾಗುವುದು~ ಎಂದು ಬಿಆರ್‌ಟಿ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ವಿಜಯ್ ಮೋಹನ್‌ರಾಜ್ `ಪ್ರಜಾವಾಣಿ~ಗೆ ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.