ಗುರುವಾರ , ಮೇ 13, 2021
40 °C

ಮಾಜಿ ಶಾಸಕ ನಾಗಪ್ಪ ನಿದನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಪಾವಗಡ ಮಾಜಿ ಶಾಸಕ ಎನ್.ನಾಗಪ್ಪ (65) ಶುಕ್ರವಾರ ಸಂಜೆ ನಗರದ ವಿದ್ಯಾನಗರದ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು.



 ಹಲವು ತಿಂಗಳುಗಳಿಂದ ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು.

ನಾಗಪ್ಪ ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಶನಿವಾರ ಬೆಳಿಗ್ಗೆ 11 ಗಂಟೆಗೆ ಪಾವಗಡ ತಾಲ್ಲೂಕಿನ ಸ್ವಗ್ರಾಮವಾದ ನಾಗಲಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.