ಶನಿವಾರ, ಮೇ 15, 2021
22 °C

ಮಾಜಿ ಸಚಿವ ಎನ್.ಚಿಕ್ಕೇಗೌಡ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಜಿ ಸಚಿವ ಎನ್.ಚಿಕ್ಕೇಗೌಡಹೊಸಕೋಟೆ:
ಮಾಜಿ ಸಚಿವ ಎನ್.ಚಿಕ್ಕೇಗೌಡ (87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರು ಒಬ್ಬ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ತಾಲ್ಲೂಕಿನ ದೊಡ್ಡಗಟ್ಟಿಗನಬ್ಬೆ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ಅವರು ಬಿ.ಎಸ್ಸಿ (ಎಜಿ) ಪದವೀಧರರು. 1964ರಲ್ಲಿ ರಾಜಕೀಯ ಪ್ರವೇಶಿಸಿದ ಅವರು ಹೊಸಕೋಟೆ ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಹೊಸಕೋಟೆ ಕ್ಷೇತ್ರದಿಂದ 1968ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 1972ರಲ್ಲಿ ದೇವರಾಜ್ ಅರಸು ಮಂತ್ರಿಮಂಡಲದಲ್ಲಿ ಪಶುಸಂಗೋಪನೆ ಸಚಿವರಾಗಿದ್ದರು. 1983ರಲ್ಲಿ ಮತ್ತೆ ಶಾಸಕರಾಗಿದ್ದ ಅವರು 1985ರಲ್ಲಿ ಸೋಲು ಅನುಭವಿಸಿದ್ದರು. 1989ರಲ್ಲಿ ಶಾಸಕರಾಗಿ ಆಯ್ಕೆಯಾದ ಚಿಕ್ಕೇಗೌಡ ಅವರು ಬಂಗಾರಪ್ಪ ಮಂತ್ರಿಮಂಡಲದಲ್ಲಿ ಕೃಷಿ ಸಚಿವರಾಗಿದ್ದರು.1994ರಲ್ಲಿ ಸೋಲು ಅನುಭವಿಸಿದ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸಲಿಲ್ಲ. ಅವರು ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿನ ದಿನಗಳವರೆಗೂ ಸಕ್ರಿಯರಾಗಿದ್ದರು. ಅವರ ಅಂತ್ಯಕ್ರಿಯೆ ಹುಟ್ಟೂರಾದ ದೊಡ್ಡಗಟ್ಟಿಗನಬ್ಬೆ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.