ಮಾಜಿ ಸಚಿವ ಜನಾರ್ದನ ರೆಡ್ಡಿ ಕಸ್ಟಡಿ ಅವಧಿ ವಿಸ್ತರಣೆಗೆ ಸಿಬಿಐ ಸಿದ್ಧತೆ

ಬುಧವಾರ, ಮೇ 22, 2019
24 °C

ಮಾಜಿ ಸಚಿವ ಜನಾರ್ದನ ರೆಡ್ಡಿ ಕಸ್ಟಡಿ ಅವಧಿ ವಿಸ್ತರಣೆಗೆ ಸಿಬಿಐ ಸಿದ್ಧತೆ

Published:
Updated:

ಹೈದರಾಬಾದ್: ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ್ ರೆಡ್ಡಿ ಅವರನ್ನು ಇನ್ನೂ ಏಳು ದಿನಗಳ ಕಾಲ ತನ್ನ ವಶದಲ್ಲಿಯೇ ಇಟ್ಟುಕೊಳ್ಳಲು ಸಿಬಿಐ ಸಿದ್ಧತೆ ನಡೆಸಿದೆ. ಜನಾರ್ದನ ರೆಡ್ಡಿ ಅವರ ನಿಕಟವರ್ತಿಗಳ ಲಾಕರ್‌ನಿಂದ ವಶಪಡಿಸಿಕೊಂಡಿರುವ ನಗದು ಮತ್ತು ದಾಖಲೆಗಳನ್ನು ಮುಂದಿಟ್ಟುಕೊಂಡು ಸಿಬಿಐ ಅಧಿಕಾರಿಗಳು ಈ ಸಿದ್ಧತೆ ನಡೆಸುತ್ತಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಿಬಿಐ ಅಧಿಕಾರಿಗಳು ಈ ಇಬ್ಬರನ್ನೂ ನಾಂಪಳ್ಳಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿದೆ. ಈ ಸಂದರ್ಭದಲ್ಲಿ ಕಸ್ಟಡಿ ಅವಧಿಯನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಮನವಿ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸೋಮವಾರ ಅಥವಾ ಮಂಗಳವಾರ ಜನಾರ್ದನ ರೆಡ್ಡಿ ಅವರನ್ನು ಬಳ್ಳಾರಿಗೆ ಕರೆದೊಯ್ದು ಲಾಕರ್‌ಗಳನ್ನು ತೆರೆಯುವ ಉದ್ದೇಶವಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಶ್ರೀನಿವಾಸ್ ರೆಡ್ಡಿ ಅವರು ತನಿಖೆಗೆ ಸಹಕರಿಸುತ್ತಿದ್ದು, ಆದರೆ ಜನಾರ್ದನ ರೆಡ್ಡಿ ಅವರು ಸರಿಯಾಗಿ ಸಹಕರಿಸುತ್ತಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ. ಆಂಧ್ರದಲ್ಲಿ ಹೂಡಿರುವ ಬಂಡವಾಳಕ್ಕೆ ಸಂಬಂಧಿಸಿದ ಕಾಗದಪತ್ರಗಳ ಮೇಲಿನ ಸಹಿ ಬಗ್ಗೆ ಕೇಳಿದಾಗ, `ಇದು ನನ್ನ ಸಹಿ ಹೌದೆ~ ಎಂದು ನಮಗೇ ಮರು ಪ್ರಶ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇಬ್ಬರ ಕಸ್ಟಡಿ ಅವಧಿ ವಿಸ್ತರಣೆಗೆ ಮನವಿ ಮಾಡುವುದರ ಜತೆಗೆ ಇಬ್ಬರನ್ನೂ ಪಾಲಿಗ್ರಾಫ್ ಮತ್ತು ನಾರ್ಕೊ ವಿಶ್ಲೇಷಣೆಗೆ ಒಳಪಡಿಸಲು ಅನುಮತಿ ಕೋರಲಾಗುತ್ತದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಬಳ್ಳಾರಿಯ ಆಕ್ಸಿಸ್ ಬ್ಯಾಂಕಿನ 350 ಲಾಕರ್‌ಗಳ ಪೈಕಿ 200 ಲಾಕರ್‌ಗಳನ್ನು ಜನಾರ್ದನ ರೆಡ್ಡಿ ಮತ್ತು ಅವರ ಆಪ್ತರೇ ಹೊಂದಿದ್ದಾರೆ. ಆರು ಲಾಕರ್‌ಗಳ ತಪಾಸಣೆ ಮಾಡಲಾಗಿದ್ದು, ಅವುಗಳಲ್ಲಿ 15 ಕೆ.ಜಿ ಚಿನ್ನದ ಬಿಸ್ಕತ್ತಗಳು, ಪ್ಲಾಟಿನಂ ಆಭರಣಗಳು ಮತ್ತು 3 ಕೋಟಿ ನಗದು ದೊರೆತಿದೆ. ಬಹುತೇಕ ಚಿನ್ನವನ್ನು ದುಬೈನಿಂದ ಆಮದು ಮಾಡಿಕೊಳ್ಳಲಾಗಿದೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry