ಶನಿವಾರ, ಜೂನ್ 19, 2021
26 °C

ಮಾಜಿ ಸಚಿವ ರಾಜಾ ಆಪ್ತ ಕಾರ್ಯದರ್ಶಿಗೆ ಹೈಕೋರ್ಟ್ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  ಕ್ಷುಲ್ಲಕ ಮನವಿ ಸಲ್ಲಿಸಿದ್ದಕ್ಕಾಗಿ 2ಜಿ ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಎ. ರಾಜಾ ಅವರ ಆಪ್ತ ಕಾರ್ಯದರ್ಶಿ ಆರ್.ಕೆ. ಚಂದೋಲಿಯಾ ಅವರಿಗೆ ದೆಹಲಿ ಹೈಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ.2ಜಿ ಹಗರಣದಲ್ಲಿ ಸಾಕ್ಷಿಯಾಗಿರುವವರನ್ನು ವಿಚಾರಣಾ ನ್ಯಾಯಾಲಯದಲ್ಲಿ ಪಾಟೀ ಸವಾಲಿಗೆ ಒಳಪಡಿಸಲು ಅನುಕೂಲವಾಗುವಂತೆ ಪ್ರಧಾನಿ ಕಾರ್ಯಾಲಯದಿಂದ ದಾಖಲೆ ಪತ್ರಗಳನ್ನು ತರಿಸಬೇಕು ಎಂದು ಚಂದೋಲಿಯಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಲ್. ಮೆಹ್ತಾ, ಇದು ಕ್ಷುಲ್ಲಕ ಅರ್ಜಿ. ವಿಚಾರಣೆ ವಿಳಂಬಗೊಳಿಸುವ ಉದ್ದೇಶದಿಂದ ಮಾತ್ರ ಸಲ್ಲಿಸಲಾಗಿದೆ ಎಂದು ತರಾಟೆಗೆ ತೆಗೆದುಕೊಂಡರು. ಚಂದೋಲಿಯಾ ಮೇಲೆ 25 ಸಾವಿರ ದಂಡ ವಿಧಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.