ಭಾನುವಾರ, ಮೇ 16, 2021
23 °C

ಮಾಜಿ ಸಭಾಧ್ಯಕ್ಷ ಎಂ.ವಿ.ವೆಂಕಟಪ್ಪ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಎಂ.ವಿ.ವೆಂಕಟಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ.ತಮ್ಮ ನಿವಾಸದಲ್ಲಿ ಇತ್ತೀಚೆಗೆ ಬಾಗಿಲು ತೆಗೆಯಲು ಹೋಗಿ ಜಾರಿ ಬಿದ್ದಿದ್ದ ಅವರಿಗೆ ತಲೆಗೆ ತೀವ್ರ ಪೆಟ್ಟಾಗಿತ್ತು. ಬಳಿಕ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸೋಮವಾರ ಸಂಜೆ ನಂತರ ಮಾತು ನಿಂತಿತು. ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರ ಪುತ್ರ ರಾಜೀವ್ ಗೌಡ `ಪ್ರಜಾವಾಣಿ'ಗೆ ತಿಳಿಸಿದರು.ಅವಾಂತರ: ವೆಂಕಟಪ್ಪ ಬದುಕಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂತಾಪ ಸೂಚನೆಯ ಸಂದೇಶವನ್ನು ವಾರ್ತಾ ಇಲಾಖೆ ಮಾಧ್ಯಮಗಳಿಗೆ ಇ-ಮೇಲ್ ಮೂಲಕ ಕಳುಹಿಸಿ, ಅವಾಂತರ ಸೃಷ್ಟಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.