ಮಂಗಳವಾರ, ಮೇ 18, 2021
31 °C

ಮಾಜಿ ಸೈನಿಕರಿಗೆ ಉದ್ಯೋಗ ಮೇಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಸೈನಿಕರು, ಸೈನಿಕ ಕಾರ್ಯಾಚರಣೆಗಳಲ್ಲಿ ಮಡಿದ ಯೋಧರ ಅವಲಂಬಿತರಿಗೆ ಇದೇ 15ರಂದು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಕರ್ನಾಟಕ ಮತ್ತು ಕೇರಳ ಉಪ ವಿಭಾಗದ ನಿವೃತ್ತ ಸೈನಿಕರ ಸಹಾಯವಾಣಿ ಈ ಮೇಳ ಆಯೋಜಿಸಿದೆ.ಬೆಂಗಳೂರು ಮತ್ತು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಪುಲ ಉದ್ಯೋಗಾವಕಾಶಗಳು ಲಭ್ಯವಿವೆ. ಮೇಳದಲ್ಲಿ ವಿವಿಧ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.ಹೆಚ್ಚಿನ ಮಾಹಿತಿಗೆ 080-25559934 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಅಥವಾ esmjobfairkarnataka@gmail.com  ಇ-ಮೇಲ್ ವಿಳಾಸಕ್ಕೆ ಮೇಲ್ ಕಳುಹಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.