ಗುರುವಾರ , ನವೆಂಬರ್ 21, 2019
26 °C

ಮಾಡಾಳು ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

Published:
Updated:

ಅರಸೀಕೆರೆ: ತಾಲ್ಲೂಕಿನ ಮಾಡಾಳು ಗ್ರಾಮದಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದ್ದು, ಈ ಬಗ್ಗೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ವಾಗಿಲ್ಲ ಎಂದು ಗ್ರಾಮಸ್ದರು ದೂರಿದ್ದಾರೆ.ಗ್ರಾಮದಲ್ಲಿ 6 ಕೊಳವೆ ಬಾವಿಗಳಿವೆ. ಆ ಪೈಕಿ 4 ಕೊಳವೆ ಬಾವಿಗಳಲ್ಲಿ ಅಂತರ್ಜಲ ಕೊರತೆಯಿಂದಾಗಿ ನೀರು ಬತ್ತಿ ಹೋಗಿವೆ.

ಇನ್ನೊಂದರಲ್ಲಿ ಕಡಿಮೆ ಪ್ರಮಾಣದಲ್ಲಿ ನೀರು ದೊರೆಯುತ್ತಿದೆ. ಪ್ರಸ್ತುತ ಅದೂ ಕೂಡ ನೀರಿಲ್ಲದೆ ಬತ್ತಿ ಹೋಗಿದ್ದು, ಇರುವ ಒಂದೇ ಒಂದು ಕೊಳವೆ ಬಾವಿ ಇಡೀ ಊರಿಗೆ ನೀರು ಪೂರೈಕೆ ಮಾಡುತ್ತಿದ್ದು, ಇದೇ ರೀತಿ ಮುಂದುವರಿದರೆ ಅದು ಸಹ ನಿಲ್ಲಬಹುದು ಎಂಬುದು ಗ್ರಾಮಸ್ಥರ ಆತಂಕವಾಗಿದೆ.ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಪಿಡಿಒ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ನೆನೆಗುದಿಗೆ ಬಿದ್ದಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ಆದ್ದರಿಂದ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು      ಗ್ರಾಮಸ್ಥರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. `ನಮಗೆ ಕುಡಿಯಲು ನೀರಿಲ್ಲ. ವಿವಿಧ ಪಕ್ಷಗಳ ಕಾರ್ಯಕರ್ತರ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಬಾರಿ ತೊಂದರೆ ಅನುಭವಿಸಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಶಶಿವಾಳ, ರಾಂಪುರ, ಡಿ.ಎಂಕುರ್ಕೆ ಗ್ರಾಮಗಳ ಜನತೆ ಮನವಿ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)