ಭಾನುವಾರ, ಮೇ 9, 2021
26 °C

ಮಾಣೆಕ್ ಷಾಗೆ ಗೌರವ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉದಕಮಂಡಲ (ತಮಿಳುನಾಡು) (ಪಿಟಿಐ):  ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಅವರ 98ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಎ.ಕೆ. ಆಂಟನಿ ಮತ್ತು ಸೇನಾ ಮುಖ್ಯಸ್ಥ ವಿ.ಕೆ ಸಿಂಗ್ ಅವರು ಮಂಗಳವಾರ ಷಾ ಅವರ ಸಮಾಧಿಗೆ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿದರು.

ಮಾಣೆಕ್ ಷಾ ಅವರಿಗೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಎ.ಕೆ ಆಂಟನಿ, ಸಶಸ್ತ್ರ ಪಡೆಗಳ ಪೀಳಿಗೆಗೆ ಅವರು ಎಂದೆಂದಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

`ಭಾರತಕ್ಕೆ ಷಾ ಅವರು ನೀಡಿದ ಕೊಡುಗೆಯನ್ನು ದೇಶ ಹಾಗೂ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅದರಲ್ಲೂ ಮುಖ್ಯವಾಗಿ 1971ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಯುದ್ಧದ ಗೆಲುವಿಗೆ ಅವರು ನೀಡಿರುವ ಕೊಡುಗೆಯನ್ನು ಮರೆಯಲಾಗದು~ ಎಂದು ರಕ್ಷಣಾ ಸಚಿವರು ಹೇಳಿದರು. ಇದಕ್ಕಿಂತಲೂ ಮೊದಲು ಆಂಟನಿ ಹಾಗೂ ಜನರಲ್ ವಿ.ಕೆ ಸಿಂಗ್ ಅವರು ಹೊಸದಾಗಿ ಸ್ಥಾಪಿಸಿರುವ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಅವರ ಸಮಾಧಿಕಲ್ಲಿಗೆ ಪುಷ್ಪಗಳನ್ನು ಸಮರ್ಪಿಸಿದರು.

ಮಾಣೆಕ್ ಷಾ ಅವರ ಇಬ್ಬರು ಪುತ್ರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.