ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತೃಭಾಷೆಯಲ್ಲಿ ವಿಜ್ಞಾನ ಕಲಿಯಲು ಸಲಹೆ

Last Updated 19 ಫೆಬ್ರವರಿ 2011, 18:30 IST
ಅಕ್ಷರ ಗಾತ್ರ

ದಾವಣಗೆರೆ: ವಿಜ್ಞಾನ ವಿಷಯವನ್ನು ಮಾತೃಭಾಷೆಯಲ್ಲಿ ಕಲಿತಾಗ ಬೇಗ ಅರ್ಥವಾಗುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಡಾ.ಎಂ.ಜಿ. ಈಶ್ವರಪ್ಪ ಅಭಿಪ್ರಾಯಪಟ್ಟರು.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ದಾವಣಗೆರೆ ವಿಜ್ಞಾನ ಕೇಂದ್ರ, ಎ.ವಿ. ಕಮಲಮ್ಮ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ,ವಿಜ್ಞಾನ ಪದವಿ ವಿದ್ಯಾರ್ಥಿಗಳಿಗಾಗಿ ಕುವೆಂಪು ವಿವಿ ಮಟ್ಟದ ಅಂತರಕಾಲೇಜು ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ವಿಷಯವನ್ನು ಅರ್ಥೈಸಿಕೊಳ್ಳುವುದು ಕ್ಲಿಷ್ಟಕರ. ಅದು ಜನಸಾಮಾನ್ಯರಿಗೂ ಅರ್ಥವಾಗಬೇಕಾದರೆ ಮಾತೃಭಾಷೆಯಲ್ಲಿ ಹೇಳಬೇಕು. ಆ ಮೂಲಕ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸಬೇಕು ಎಂದು ತಿಳಿಸಿದರು.ಬಿಐಇಟಿ ನಿರ್ದೇಶಕ ಪ್ರೊ.ವೈ. ವೃಷಭೇಂದ್ರಪ್ಪ ಮಾತನಾಡಿ, ನಮ್ಮ ಸುತ್ತಮುತ್ತ ನಡೆಯುವುದೆಲ್ಲ ವಿಜ್ಞಾನವೇ ಆಗಿದೆ.ಯಾವುದೇ ವಿಷಯವನ್ನು ಪರಿಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದರು.

ಎವಿಕೆ ಕಾಲೇಜು ಪ್ರಾಂಶುಪಾಲರಾದ ಪ್ರೊ. ಜೆ.ಕೆ. ಇಂದುಮತಿ, ರಾಜ್ಯ ವಿಶ್ವವಿದ್ಯಾಲಯಗಳ ಹಾಗೂ ಕಾಲೇಜು ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಸಿ.ಎಚ್. ಮುರಿಗೇಂದ್ರಪ್ಪ ಮಾತನಾಡಿದರು.

ಬಿಐಇಟಿ ಪ್ರಾಧ್ಯಾಪಕ ಡಾ.ಬಿ.ಇ. ರಂಗಸ್ವಾಮಿ, ರಾಜ್ಯ ವಿಜ್ಞಾನ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಎನ್. ಮುಸ್ಟೂರಪ್ಪ, ಜಗಳೂರು ನಳಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಎನ್. ಮರೀಗೌಡ್ರು ಹಾಜರಿದ್ದರು. ಅಂಗಡಿ ಸಂಗಪ್ಪ ವಂದಿಸಿದರು. ಎಂ. ಗುರುಸಿದ್ದಸ್ವಾಮಿ ನಿರೂಪಿಸಿದರು.ಕುವೆಂಪು ವಿವಿ ವ್ಯಾಪ್ತಿಯ 20 ಕಾಲೇಜಿನ 30 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT