ಮಾತೃಭಾಷೆ ಪ್ರೀತಿ ಬೆಳೆಸಿಕೊಳ್ಳಲು ಸಲಹೆ

7

ಮಾತೃಭಾಷೆ ಪ್ರೀತಿ ಬೆಳೆಸಿಕೊಳ್ಳಲು ಸಲಹೆ

Published:
Updated:

ಚಾಮರಾಜನಗರ: ‘ಮಾತೃಭಾಷೆ ಬಗ್ಗೆ ಹೆಚ್ಚು ತಿಳಿದುಕೊಂಡರೆ ಬಳಕೆ ಸುಲಭವಾಗುತ್ತದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಎಸ್. ಗಂಗಣ್ಣನವರ್ ಹೇಳಿದರು.

ನಗರದ ಸೇವಾಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾರತ್ ವಿಕಾಸ್ ಪರಿಷದ್‌ನಿಂದ ಶನಿವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಹಾಗೂ ಸುಭಾಷ್‌ಚಂದ್ರ ಬೋಸ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಹೆಚ್ಚು ಒತ್ತು ನೀಡಬೇಕು. ಭಾಷೆಗೆ ತನ್ನದೆಯಾದ ಅಂಗರಚನೆ ಇರುತ್ತದೆ. ಅದನ್ನು ಅರ್ಥೈಸಿಕೊಂಡರೆ ಕಲಿಕೆ ಸುಲಭ ವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ಆವಶ್ಯಕ. ಅದಕ್ಕೆ ಮಾನಸಿಕ ಹಾಗೂ ದೈಹಿಕ ಚಟುವಟಿಕೆ ಅವಶ್ಯ ಎಂದ ಅವರು, ವಿವೇಕಾನಂದರು ಸನ್ಯಾಸಿಯಾಗಿಯೂ ಜೀವನದ ಸಾಧನೆ ಮಾಡಬಹುದು ಎಂದು ತೋರಿಸಿ ಕೊಟ್ಟಿದ್ದಾರೆ. ಅವರ ತತ್ವಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದು ಹೇಳಿದರು.ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ದಾನೇಶ್ವರಿ ಮಾತನಾಡಿ, ಶಿಕ್ಷಣವೆಂದರೆ ಕೇವಲ ಓದುವುದಲ್ಲ. ಆಂತರಿಕ ಶಕ್ತಿಯ ವಿಕಸನ, ಮನೋಬಲ ಹೆಚ್ಚಿಸು ವುದು ಮತ್ತು ಮೌಲ್ಯಗಳ ಬಗ್ಗೆ ಜಾಗೃತಿ ಮಾಡು ವುದೇ ನಿಜವಾದ ಶಿಕ್ಷಣ ಎಂದು ವಿಶ್ಲೇಷಿಸಿದರು.ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ತುಂಬಲು ತರಬೇತಿಯ ಆವಶ್ಯಕತೆಯಿದೆ. ಮಕ್ಕಳಿಗೆ ಹಲವು ಒತ್ತಡ ಹೆಚ್ಚುತ್ತಿವೆ. ಪೋಷಕರು ಮತ್ತು ಶಿಕ್ಷಕರು ಮಕ್ಕಳ ಸಾಮರ್ಥ್ಯ ಹೆಚ್ಚಿಸಲು ವಿಶೇಷ ಒತ್ತು ಕೊಡಬೇಕು ಎಂದು ಸಲಹೆ ನೀಡಿದರು.ಭಾರತ್ ವಿಕಾಸ್ ಪರಿಷದ್‌ನ ಅಧ್ಯಕ್ಷ ಶಂಕರ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕನ್ನಡದಲ್ಲಿ ತೀರ್ಪು ನೀಡಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಶಸ್ತಿಗೆ ಪುರಸ್ಕೃತರಾಗಿರುವ ನ್ಯಾಯಾಧೀಶ ಕೆ.ಎಸ್. ಗಂಗಣ್ಣನವರ್ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಮೈಸೂರು ರುಡ್‌ಸೆಟ್‌ನ ನಿರ್ದೇಶಕ ಜಗದೀಶ್, ಕೆ. ಬಾಲಸುಬ್ರಹ್ಮಣ್ಯಂ, ಸೇವಾಭಾರತಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಎಸ್. ಸುಬ್ರಹ್ಮಣ್ಯ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry