ಮಾದರಿ ಜಿಲ್ಲೆಗೆ ಪ್ರಯತ್ನ: ಸಚಿವ ಬೆಳಮಗಿ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಮಾದರಿ ಜಿಲ್ಲೆಗೆ ಪ್ರಯತ್ನ: ಸಚಿವ ಬೆಳಮಗಿ

Published:
Updated:

ಗುಲ್ಬರ್ಗ: ನಾಲ್ಕು ವರ್ಷಗಳಲ್ಲಿ ನೆರೆ-ಬರಕ್ಕೆ ತುತ್ತಾದ ಪ್ರದೇಶಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗಾಗಿ ಮತ್ತು ಮೂಲಸೌಕರ್ಯಗಳ ದುರಸ್ತಿಗಾಗಿ 150.81 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಪಶು ಸಂಗೋಪನಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರೇವುನಾಯಕ ಬೆಳಮಗಿ ತಿಳಿಸಿದರು.

ಜಿಲ್ಲಾಡಳಿತ ವತಿಯಿಂದ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನೆರೆ ಹಾವಳಿಯಿಂದ ತೊಂದರೆಗೀಡಾದ 41ಗ್ರಾಮಗಳನ್ನು ಸ್ಥಳಾಂತರಿಸುವ  ಕಾರ್ಯ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಈವರೆಗೆ 2,625 ಆಸರೆ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗುಲ್ಬರ್ಗ ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿಯಲಿದ್ಲ್ದು, ಕೆಲವೆ ತಿಂಗಳಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ತಿಳಿಸಿದರು.

ಬೀದರ್- ಗುಲ್ಬರ್ಗ ರೈಲು ಮಾರ್ಗ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು, 933 ಎಕರೆ ಜಮೀನನ್ನು ಭೂಸ್ವಾಧೀನ ಪಡಿಸಿಕೊಂಡು ರೈಲ್ವೆ  ಇಲಾಖೆಗೆ ಹಸ್ತಾಂತರಿಸಲಾಗಿದೆ. ಇದಕ್ಕಾಗಿ ರೂ. 13.85 ಕೋಟಿ  ಪರಿಹಾರ ಮೊತ್ತ ನೀಡಲಾಗಿದೆ. 2015ರಲ್ಲಿ ರೈಲು ಸಂಚಾರ ಆರಂಭಗೊಳ್ಳಲಿದೆ ಎಂದರು. 

ಗುಲ್ಬರ್ಗ ನಗರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿ 2 ಹಂತಗಳಲ್ಲಿ ಒಟ್ಟು ರೂ. 200 ಕೋಟಿ ಒದಗಿಸಲಾಗಿದ್ದು, ಈವರೆಗೆ ರೂ. 133 ಕೋಟಿ  ಖರ್ಚಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆಗಳನ್ನು ವಿಸ್ತರಣೆ ಮಾಡಿ ರಾಷ್ಟ್ರೀಯ ಹೆದ್ದಾರಿಗಳಂತೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಬೆಳಮಗಿ ತಿಳಿಸಿದರು. 

2010ರಲ್ಲಿ ನಡೆದ ವಿಶ್ವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಜಿಲ್ಲೆಗೆ 14 ಘಟಕಗಳು ಅನುಮೋದನೆಗೊಂಡು ರೂ. 14,710.55 ಕೋಟಿ  ಹಾಗೂ 2012ರಲ್ಲಿ ನಡೆದ ಸಮಾವೇಶದಲ್ಲಿ 25 ಘಟಕಗಳು ಅನುಮೋದನೆಗೊಂಡು ರೂ. 25,389 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, 17,126 ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಅಭಿವೃದ್ಧಿಯೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಹಾಗೂ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹತ್ತು ಹಲವು ಯೋಜನೆಗಳನ್ನು ರೂಪಿಸಿ ಅಗತ್ಯ ಅನುದಾನ ನೀಡಿದ್ದಾರೆ. ಇರುವ ಕಡಿಮೆ ಅವಧಿಯಲ್ಲಿಯೇ ತವರು ಮನೆ (ಗುಲ್ಬರ್ಗ) ಯನ್ನು  ಎಲ್ಲರ ಸಹಕಾರದಿಂದ ಮಾದರಿ ಜಿಲ್ಲೆಯನ್ನಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಹಂತಕ್ಕೆ  ಮುಂದಾಗುವಂತೆ ಮಾಡಿದ ಖರ್ಗೆ, ಧರ್ಮಸಿಂಗ್, ವೀರಪ್ಪ ಮೊಯಿಲಿ ಕೆ.ಎಚ್. ಮುನಿಯಪ್ಪ, ಪಿ.ಚಿದಂಬರಂ ಅವರಿಗೆ ಈ ಭಾಗದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯರಾದ ಕೆ.ಬಿ. ಶಾಣಪ್ಪ , ಶಶೀಲ್ ನಮೋಶಿ, ಅಲ್ಲಮಪ್ರಭು ಪಾಟೀಲ, ಅಮರನಾಥ ಪಾಟೀಲ, ಜಿಪಂ ಅಧ್ಯಕ್ಷ ದೀಪಕ್‌ನಾಗ್ ಪುಣ್ಯಶೆಟ್ಟಿ, ಎಂಎಸ್‌ಐಎಲ್ ಅಧ್ಯಕ್ಷ ಡಾ. ವಿಕ್ರಮ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿದ್ಯಾಸಾಗರ ಕುಲಕರ್ಣಿ, ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್, ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ ಮಧುಕರ ಪವಾರ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಮುಖ್ಯ ಅಧಿಕಾರಿ ಎಂ.ಜಿ.ವಿಜಯಕುಮಾರ, ಪಾಲಿಕೆ ಆಯುಕ್ತ ಸಿ.ನಾಗಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಲತಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry