ಮಂಗಳವಾರ, ಮೇ 18, 2021
22 °C

`ಮಾದರಿ ರಾಜ್ಯಕ್ಕೆ ಪ್ರಾಮಾಣಿಕ ಯತ್ನ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: `ಜನರ ನಿರೀಕ್ಷೆ ಹುಸಿಯಾಗದಂತೆ ಕೆಲಸ ಮಾಡುವ ಮೂಲಕ, ಇಡೀ ದೇಶದಲ್ಲಿಯೇ ರಾಜ್ಯವನ್ನು ಮಾದರಿ ರಾಜ್ಯ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಭಾನುವಾರ ಮಾಳಿಂಗರಾಯ ವಿದ್ಯಾರ್ಥಿನಿಲಯದ ಉದ್ಘಾಟನೆ ಹಾಗೂ ದಾಸೋಹ ಭವನದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.`ಹಿಂದಿನ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತ್ದ್ದಿದರು. ಭ್ರಷ್ಟಾಚಾರಕ್ಕೆ ಮುಕ್ತಿ ಹಾಡಿ, ಸ್ಥಿರ ಸರ್ಕಾರ ನೀಡಬೇಕೆಂಬ ಉದ್ದೇಶದಿಂದಲೇ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಜನರ ಬಯಕೆಯಂತೆ ಭ್ರಷ್ಟಾಚಾರ ಮುಕ್ತ ಹಾಗೂ ಜನಪರ ಸರ್ಕಾರ ನೀಡಲು ಬದ್ಧರಿದ್ದು, ರಾಜ್ಯವನ್ನು ದೇಶದಲ್ಲಿಯೇ ನಂಬರ್ ಒನ್ ರಾಜ್ಯ ಮಾಡಲಾಗುವುದು' ಎಂದರು.ಮಾಳಿಂಗರಾಯ ವಿದ್ಯಾರ್ಥಿ ವಸತಿನಿಲಯ ನಿರ್ಮಾಣಕ್ಕೆ ಎರಡು ಕೋಟಿ ರೂಪಾಯಿ ದೇಣಿಗೆ ನೀಡಿದ ಶಾಸಕ ಮತ್ತು ಉದ್ಯಮಿ ಅಶೋಕ ಖೇಣಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕುರುಬ ಸಮುದಾಯದ ಶಾಸಕರನ್ನು ಕನಕ ಗುರುಪೀಠದ ವತಿಯಿಂದ ಸನ್ಮಾನಿಸಲಾಯಿತು.ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಹರಿಹರ ಪಂಚಮಸಾಲಿ ಪೀಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಹಾಗೂ ಹೊಸದುರ್ಗ, ತಿಂಥಣಿ, ಕೆ.ಆರ್.ನಗರ ಕನಕ ಗುರುಪೀಠದ ಸ್ವಾಮೀಜಿ ಸಮ್ಮುಖದಲ್ಲಿ ಈ ಕಾರ್ಯಕ್ರಮಗಳು ನಡೆದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.