ಗುರುವಾರ , ಜೂನ್ 24, 2021
29 °C

ಮಾಧ್ಯಮಗಳು ರೈತರೊಂದಿಗೆ ಕೈಜೋಡಿಸಲಿ: ನೀತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಣಿಕೊಪ್ಪಲು: ನೂತನ ಅವಿಷ್ಕಾರಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ಮಾಧ್ಯಮಗಳು ಕೈ ಜೋಡಿಸಬೇಕು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಬೆಳೆಗಳನ್ನು ಲಾಭದಾಯಕ ಕೃಷಿಯನ್ನಾಗಿ ಮಾಡಿ ಆರ್ಥಿಕವಾಗಿ ರೈತರನ್ನು ಬಲಿಷ್ಟಗೊಳಿಸಬೇಕು ಎಂದು ಬೆಂಗಳೂರು ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದ ಪ್ರಧಾನ ವಿಜ್ಞಾನಿ ಡಾ.ನೀತಾ ಕಾಂಡೇಕರ್ ಹೇಳಿದರು.ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಮತ್ತು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬೆಂಗಳೂರು ಭಾರತೀಯ ತೋಟಗಾರಿಕಾ ಸಂಸ್ಥೆ ಹಿರಿಯ ವಿಜ್ಞಾನಿ ಡಾ.ಗದಗಿಮಠ್ ಮಾತನಾಡಿ,  ಭಾರತೀಯ ತೋಟಗಾರಿಕೆ ಸಂಸ್ಥೆ ನಡೆಸಿದ ಸಂಶೋಧನೆಗಳನ್ನು ತಾಂತ್ರಿಕವಾಗಿ ಬಳಸಿಕೊಂಡು  ರೈತರಿಗೆ ತಂತ್ರಜ್ಞಾನದ ಮಾಹಿತಿ ನೀಡಲಾಗುವುದು. ರೈತರು ಪರಸ್ಪರ ವಿನಿಮಯ ಮಾಡಿಕೊಳ್ಳುವುದರಿಂದ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.ಜಿಲ್ಲೆಯಲ್ಲಿ ಕಾಫಿ, ಕಾಳುಮೆಣಸು ಬೆಳೆಗಳೊಂದಿಗೆ ಉಪ ಬೆಳೆಗಳನ್ನು ಬೆಳೆದು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು ಎಂದು ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಸಂಸ್ಥೆ ಮುಖ್ಯಸ್ಥ ಡಾ.ತ್ರಿಪಾಠಿ ತಿಳಿಸಿದರು.ಕೊಡಗಿನಲ್ಲಿ ಬೆಳೆಯಬಹುದಾದ ಪೇಶನ್ ಫ್ರೂಟ್, ಮಾವು, ಟೊಮೆಟೊ, ಬೀನ್ಸ್, ಪಪ್ಪಾಯ ಬೆಳೆಗಳ ಬಗ್ಗೆ ಡಾ.ಬಾಲಕೃಷ್ಣ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡಿದರು.ಬೆಂಗಳೂರು ಸಂಶೋಧನಾ ಕೇಂದ್ರವು ಅರ್ಕಾವತಿ ನದಿಯ ದಂಡೆಯಲ್ಲಿರುವುದರಿಂದ ನಾವು ಸಂಶೋಧಿಸಿ ಅಭಿವೃದ್ಧಿ ಪಡಿಸಿದ ಬೆಳೆಗಳಿಗೆ ‘ಅರ್ಕಾ’ ಎಂಬ ಬ್ರ್ಯಾಂಡ್ ಹೆಸರಿನಲ್ಲಿ ಕರೆಯುತ್ತೇವೆ ಎಂದರು.ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.