ಭಾನುವಾರ, ಮೇ 9, 2021
28 °C

ಮಾಧ್ಯಮಗಳ ಜೊತೆ ಮಾತು ಬೇಡ: ರಮ್ಯಾಗೆ ತಾಕೀತು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯುವ ಕಾಂಗ್ರೆಸ್‌ನ ಚುನಾವಣಾ ಉಸ್ತುವಾರಿ ಹೊತ್ತಿರುವ `ಫೇಮ್~ ಸಂಸ್ಥೆ (ಚುನಾವಣೆಗಳ ಸುಧಾರಿತ ನಿರ್ವಹಣಾ ಪ್ರತಿಷ್ಠಾನ) ಮಾಧ್ಯಮಗಳ ಜೊತೆ ಸಂವಾದ ನಡೆಸದಂತೆ ನಟಿ, ಯುವ ಕಾಂಗ್ರೆಸ್ ಸದಸ್ಯೆ ರಮ್ಯಾ ಅವರಿಗೆ ತಾಕೀತು ಮಾಡಿದೆ.ಯುವ ಕಾಂಗ್ರೆಸ್‌ನ ಬೂತ್ ಮಟ್ಟದ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ನಂತರ ರಮ್ಯಾ ಅವರು ಮಾಧ್ಯಮಗಳಿಗೆ ಸಾಕಷ್ಟು ಬಾರಿ ಸಂದರ್ಶನ ನೀಡಿದ್ದರು. ಯುವ ಕಾಂಗ್ರೆಸ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ವ್ಯಕ್ತಿ ಮಾಧ್ಯಮಗಳಿಗೆ ಸಂದರ್ಶನ ನೀಡುವುದು ಚುನಾವಣಾ ನೀತಿಸಂಹಿತೆಗೆ ವಿರುದ್ಧವಾದ ಕಾರಣ ರಮ್ಯಾ ಸಂದರ್ಶನ ವಿಚಾರದ ಕುರಿತು ಲೋಕಸಭಾ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು.

ದೂರಿನ ಆಧಾರದಲ್ಲಿ ರಮ್ಯಾ ಅವರಿಗೆ ಮಾಧ್ಯಮಗಳಿಂದ ದೂರ ಇರುವಂತೆ ಸೂಚನೆ ನೀಡಲಾಗಿದೆ. ಆದರೆ ರಮ್ಯಾ ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಲಾಗಿಲ್ಲ ಎಂದು ತಿಳಿದುಬಂದಿದೆ.

 

`ಚುನಾವಣೆಯಲ್ಲಿ ಉಮೇದುವಾರರಾಗಿ ನಾಮಪತ್ರ ಸಲ್ಲಿಸಿದವರು ಮಾಧ್ಯಮಗಳೊಂದಿಗೆ ಮಾತನಾಡುವಂತಿಲ್ಲ. ನಾಮಪತ್ರ ಸಲ್ಲಿಸಿದವರಿಗೆ ನೀಡಲಾಗಿರುವ ಕೈಪಿಡಿಯಲ್ಲೂ ಈ ಕುರಿತು ಸ್ಪಷ್ಟಪಡಿಸಲಾಗಿದೆ~ ಎಂದು ಯುವ ಕಾಂಗ್ರೆಸ್‌ನ ರಾಜ್ಯ ಚುನಾವಣಾಧಿಕಾರಿ ವಿ.ಕೆ. ಅರಿವಳಗನ್ ತಿಳಿಸಿದರು.ಯುವ ಕಾಂಗ್ರೆಸ್ ನೀತಿಸಂಹಿತೆ ಉಲ್ಲಂಘಿಸುವ ವ್ಯಕ್ತಿಯನ್ನು ಚುನಾವಣಾ ಪ್ರಕ್ರಿಯೆಯಿಂದ ಅನರ್ಹಗೊಳಿಸಬಹುದು ಎಂದು ಅರಿವಳಗನ್ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.