ಗುರುವಾರ , ಜೂನ್ 24, 2021
25 °C

ಮಾಧ್ಯಮದವರ ಮೇಲಿನ ಹಲ್ಲೆಗೆ ವಕೀಲರೇ ನೇರ ಕಾರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮಾಧ್ಯಮದವರ ಮೇಲೆ ಶುಕ್ರವಾರ ನಡೆದ ಹಲ್ಲೆಗೆ ವಕೀಲರೇ ನೇರ ಕಾರಣ~ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಸರ್ಕಾರಕ್ಕೆ ಶನಿವಾರ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದ್ದಾರೆ.ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಘಟನೆಗಳ ಬಗ್ಗೆ ಅವರು ಸರ್ಕಾರಕ್ಕೆ ಪೂರ್ಣ ವರದಿ ಸಲ್ಲಿಸಿದ್ದು, ಅದರಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದ್ದಾರೆ.ಜನಾರ್ದನ ರೆಡ್ಡಿ ಅವರನ್ನು ಸಿಬಿಐ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕರೆತಂದಾಗ ಅಲ್ಲಿಗೆ ಮಾಧ್ಯಮದವರು ಕೂಡ ಹೋದರು. ಆ ಸಂದರ್ಭದಲ್ಲಿ ಏಕಾಏಕಿ ಗಲಾಟೆ ಮಾಡಿದ್ದು ವಕೀಲರು. ಇದ್ದಕ್ಕಿದ್ದ ಹಾಗೆ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದರು ಎಂದು ಮಿರ್ಜಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಘಟನೆಗೆ ಕಾರಣರಾದ ವಕೀಲರ ಹೆಸರುಗಳನ್ನೂ ಅವರು ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ. ವರದಿಯನ್ನು ಮುಖ್ಯಮಂತ್ರಿ ಸದಾನಂದ ಗೌಡ, ಗೃಹ ಸಚಿವ ಆರ್.ಅಶೋಕ ಮತ್ತು ಕಾನೂನು ಸಚಿವ ಸುರೇಶ್‌ಕುಮಾರ್ ಅವರಿಗೆ ಸಲ್ಲಿಸಲಾಗಿದೆ.ಸುದೀರ್ಘ ಸಭೆ: ಈ ನಡುವೆ ಮುಖ್ಯಮಂತ್ರಿಯವರು ಮೈಸೂರಿನಿಂದ ನಗರಕ್ಕೆ ಬಂದ ತಕ್ಷಣವೇ ಗೃಹ ಮತ್ತು ಕಾನೂನು ಸಚಿವರನ್ನು ಕರೆಸಿಕೊಂಡು ಸುದೀರ್ಘ ಸಭೆ ನಡೆಸಿದರು. ವಕೀಲರು ಮತ್ತು ಮಾಧ್ಯಮದವರ ನಡುವಿನ ವೈಮನಸ್ಸನ್ನು ತಿಳಿಗೊಳಿಸಲು ಏನೆಲ್ಲ ಪ್ರಯತ್ನ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದರು ಎಂದು ಗೊತ್ತಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.