ಭಾನುವಾರ, ಮೇ 9, 2021
25 °C

ಮಾಧ್ಯಮದವರ ಮೇಲೆ ಹಲ್ಲೆ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ನಗರಸಭೆಯ ಬಜೆಟ್ ಮಂಡನೆಯ ನಂತರ ನಡೆದ ಪಾರ್ಟಿಯ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಘಟನೆಗೆ ಸಂಬಂಧ ನಗರಸಭೆ ಅಧ್ಯಕ್ಷ ಅರುಣ್‌ಕುಮಾರ್, ಆಯುಕ್ತ ಪ್ರಕಾಶ್ ಸೇರಿ ಹಲವರ ವಿರುದ್ಧ ಮಾಧ್ಯಮ ಪ್ರತಿನಿಧಿಗಳು ದೂರು ನೀಡಿದ್ದಾರೆ.ಪ್ರಕರಣ ದಾಖಲು ಮಾಡಿರುವ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು, ಮಾಧ್ಯಮ ಪ್ರತಿನಿಧಿಗಳ ಕೆಮೆರಾವನ್ನು ಜಖಂಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ವೀಡಿಯೋ ದಾಖಲೆಗಳನ್ನು ಆಧರಿಸಿ ಇಬ್ಬರನ್ನು ಬಂಧಿಸಿದ್ದಾರೆ.`ಪ್ರಕರಣ ಸಂಬಂಧ ಐಪಿಸಿ 427, 323 ಕಾಯ್ದೆಯ ಅನುಸಾರ ಪ್ರಕರಣ ದಾಖಲು ಮಾಡಲಾಗಿದೆ. ವೀಡಿಯೋ ದಾಖಲೆಗಳನ್ನು ಆಧರಿಸಿ ಕೆಮೆರಾ ಧ್ವಂಸ ಮಾಡಿದ ವ್ಯಕ್ತಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ~ ಎಂದು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ತಿಳಿಸಿದ್ದಾರೆ.ಅಧ್ಯಕ್ಷರು ಮತ್ತು ಆಯುಕ್ತರು ಸೇರಿದಂತೆ ಹಲವರನ್ನು ದೂರಿನಲ್ಲಿ ಹೆಸರಿಸಲಾಗಿದ್ದರೂ, ಸಾಕ್ಷ್ಯಾಧಾರ ಆಧರಿಸಿ ವಿಚಾರಣೆ ನಡೆಸಲಾಗು ವುದು. ಆ ಬಳಿಕ ಹಲ್ಲೆ ಮಾಡಿದ ಘಟನೆಯಲ್ಲಿ ಭಾಗಿಯಾಗಿದ್ದವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ವಿವರಿಸಿದರು.ಈ ನಡುವೆ, ಜನಶ್ರೀ ವರದಿಗಾರ ಯತೀಶ್‌ಬಾಬು ಮತ್ತು ದೃಶ್ಯ ಮಾಧ್ಯಮದ ಪ್ರತಿನಿಧಿಗಳು ಘಟನೆಗೆ ಸಂಬಂಧಿಸಿದಂತೆ ಠಾಣೆಗೆ ದೂರು ನೀಡಿದ್ದು ಹಲ್ಲೆ, ಪ್ರಾಣ ಬೆದರಿಕೆ ವಸ್ತುಗಳ ನಾಶ ಅಂಶಗಳನ್ನು ಉಲ್ಲೇಖಿಸಿದ್ದಾರೆ.ಮಂಗಳವಾರ ನಗರಸಭೆಯ ಬಜೆಟ್ ಮಂಡನೆಯಾಗಿತ್ತು. ಇದರ ಹಿನ್ನೆಲೆಯಲ್ಲಿ ರಾತ್ರಿ ಹೊರವಲಯದ ಅಸಿಟೇಟ್‌ಟೌನ್ ವಸತಿಗೃಹದಲ್ಲಿ ಪಾರ್ಟಿಯನ್ನು ಆಯೋಜಿಸಿದ್ದು, ಗುತ್ತಿಗೆದಾರರು, ನಗರಸಭೆಯ ಕೆಲ ಸಿಬ್ಬಂದಿಗಳು ಅಲ್ಲದೆ, ಅಧ್ಯಕ್ಷ, ಆಯುಕ್ತರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.ನಗರ, ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆಯೂ ಸೇರಿದಮತೆ ವಿವಿಧ ಸಮಸ್ಯೆಗಳಿರುವಾಗ ನಗರಸಭೆ ಸದಸ್ಯರು, ಅಧಿಕಾರಿಗಳು ಪಾರ್ಟಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿ, ಕೆಮೆರಾ ಜಖಂಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.