ಗುರುವಾರ , ಜೂನ್ 24, 2021
29 °C

ಮಾಧ್ಯಮ ಪ್ರತಿನಿಧಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಪೊಲೀಸ್ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರು ನಡೆಸಿದ ಹಲ್ಲೆಯನ್ನು ಖಂಡಿಸಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಮಾಧ್ಯಮ ಪ್ರತಿನಿಧಿಗಳು ಸೋಮವಾರ ಇಲ್ಲಿನ ಪ್ರೆಸ್‌ಕ್ಲಬ್ ಆವರಣದಲ್ಲಿ ಸಮಾವೇಶಗೊಂಡು ನಂತರ ಎಂಜಿ ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಪತ್ರಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.ಪೂರ್ವಭಾವಿ ಸಭೆ: ಇದಕ್ಕೂ ಮೊದಲು ಬೃಹತ್ ಪ್ರತಿಭಟನಾ ರ‌್ಯಾಲಿಯ ಹಿನ್ನೆಲೆಯಲ್ಲಿ ಮಾಧ್ಯಮ ಸಂಸ್ಥೆಗಳ ಪ್ರಮುಖ ಮುಖ್ಯಸ್ಥರು ಇಲ್ಲಿನ ಖಾಸಗಿ ಹೊಟೆಲ್ಲೊಂದರಲ್ಲಿ ಮುಖ್ಯಮಂತ್ರಿ ಸದಾನಂದ ಗೌಡ ಅವರೊಂದಿಗೆ ಸಭೆಯನ್ನು ನಡೆಸಿದರು.ಸಭೆಯಲ್ಲಿ ರಾಷ್ಟ್ರೀಯ ಎಲೆಕ್ಟ್ರಾನಿಕ್ ಮಾಧ್ಯಮಗಳ ಮುಖ್ಯಸ್ಥರು ಸೇರಿದಂತೆ ರಾಜ್ಯದ ಪ್ರಮುಖ ಪತ್ರಿಕೆಗಳ ಸಹಾ ಸಂಪಾದಕರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.