`ಮಾನವನ ದುರಾಸೆಯಿಂದ ಪರಿಸರ ನಾಶ'

7

`ಮಾನವನ ದುರಾಸೆಯಿಂದ ಪರಿಸರ ನಾಶ'

Published:
Updated:

ಗುಲ್ಬರ್ಗ: ಮಾನವನ ಅತಿಯಾದ ದುರಾಸೆಯಿಂದ ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿರುವುದರಿಂದ ನೆಲ,  ಜಲ ಹಾಗೂ ಗಾಳಿ ಮಲಿನವಾಗುತ್ತಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ ಅಭಿಪ್ರಾಯಪಟ್ಟರು.ಗುಲ್ಬರ್ಗ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಸಂಶೋಧನಾ ಅಧ್ಯಯನ ವಿಭಾಗದ ಬಸವೇಶ್ವರ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ `ಪರಿಸರದ ಮೇಲೆ ಜಾಗತೀಕರಣದ ಪ್ರಭಾವ' ಕುರಿತ ವಿಶೇಷ ಉಪನ್ಯಾಸ ಮತ್ತು ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಜೀವ ವೈವಿಧ್ಯದ ಕೊಂಡಿ ನಾಶವಾದರೆ ಅದರ ಪುನರ್‌ಸೃಷ್ಟಿ ಸಾಧ್ಯವಿಲ್ಲ. ಪರಿಸರ ಮಾಲಿನ್ಯ ತಡೆಗಟ್ಟುವುದು ಸರ್ಕಾರ ಇಲ್ಲವೇ ಯಾವುದೇ ಸ್ವಯಂಸೇವಾ ಸಂಸ್ಥೆಗಳ ಕೆಲಸವಲ್ಲ; ಪರಿಸರ ಸಂರಕ್ಷಿಸುವ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಬೇಕು. ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೆ ಹಾಗೂ ಪರಿಸರಕ್ಕೆ ಅವಿನಾಭಾವ ಸಂಬಂಧವಿದ್ದು, ಕಾರ್ಖಾನೆ ಸ್ಥಾಪಿಸುವ ಸಂದರ್ಭದಲ್ಲಿ ಸಮಾಜಕ್ಕೆ ಆಗುವ ಲಾಭದ ಜೊತೆಗೆ ಪರಿಸರಕ್ಕೆ ಆಗುವ ಹಾನಿ ಕುರಿತು ಸಹ ವಿಸ್ತೃತ ವರದಿ ಸಿದ್ಧಪಡಿಸುವ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆಯಾಗಿ ನಾಮ ನಿರ್ದೇಶನಗೊಂಡ ಸಮಾಜ ವಿಜ್ಞಾನ ವಿಭಾಗದ ಡೀನ್ ಡಾ.ಛಾಯಾದೇಗಾಂವಕರ್ ಅವರನ್ನು ಸನ್ಮಾನಿಸಲಾಯಿತು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಾಸುದೇವ ಸೇಡಂ ಅಧ್ಯಕ್ಷತೆ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry