ಶನಿವಾರ, ಏಪ್ರಿಲ್ 17, 2021
23 °C

ಮಾನವೀಯ ಮೌಲ್ಯಗಳ ಕುಸಿತ: ಇತ್ಲಿ ವಿಷಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ: ಜಗತ್ತಿನಲ್ಲಿ ಭಾರತಕ್ಕೆ ವಿಶಿಷ್ಟ ಸ್ಥಾನವಿದೆ. ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಕಲಿಸಿದ ರಾಷ್ಟ್ರ ಭಾರತ. ಆದರೆ ಇಂದು ಪಾಶ್ಚಮಾತ್ಯ ದೇಶಗಳ ಸಂಸ್ಕೃತಿಗೆ ಜೋತುಬಿದ್ದು  ಮಾನವೀಯ ಮೌಲ್ಯಗಳು ಕುಂಠಿತಗೊಳ್ಳುತ್ತಿವೆ ಎಂದು ಡಾ.ಶಿವಶರಣಪ್ಪ ಇತ್ಲಿ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ದೇವನಾಂಪ್ರಿಯ ಅಶೋಕ ಸರ್ಕಾರಿ ಪದವಿ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಮಾನವೀಯ ಮೌಲ್ಯಗಳ ಅನುಷ್ಠಾನ ಮತ್ತು ಉತ್ತಮ ಬದುಕಿನ ನಿರ್ವಹಣೆಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಸಮಯ ಪರಿಪಾಲನೆ, ಪೌಷ್ಟಿಕ ಆಹಾರ ಸೇವನೆ, ಆರೋಗ್ಯದ ಕಾಳಜಿ, ನಿತ್ಯ ವ್ಯಾಯಮಗಳನ್ನು ರೂಢಿಸಿಕೊಂಡರೆ ಉತ್ತಮ ಬದಕು ನಿರ್ವಹಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.ಕರ್ನಾಟಕ ಸರ್ಕಾರ ಹಾಗೂ ರವಿಶಂಕರ ಗೂರುಜಿಯವರ ‘ವೇ’ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ ಆಯ್ದ ಸರ್ಕಾರಿ ಕಾಲೇಜುಗಳಲ್ಲಿ ಈ ಕಾರ್ಯಾಗಾರ ನಡೆಯುತ್ತಿದ್ದು, ಪಟ್ಟಣದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆಂದು ತರಬೇತಿದಾರ ಅರವಿಂದ ನುಡಿದರು.ಪ್ರಪಂಚದ ಎಲ್ಲಾ ಧರ್ಮದ ದಾರ್ಶನಿಕರು ಮಾನವೀಯ ಮೌಲ್ಯಗಳನ್ನು ಪ್ರಚುರಪಡಿಸಿದ್ದಾರೆ. ಅದರಂತೆ ಸರ್ಕಾರ ಮತ್ತು ಸಂಘ ಸಂಸ್ಥೆಗಳು ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ಕಾಲೇಜಿನನಲ್ಲಿ ನಡೆಸಿರುವುದು ಶ್ಲಾಘನೀಯ ಎಂದು ಪ್ರಾಚಾರ್ಯ ದಾವಲಸಾಬ ಹೇಳಿದರು.ತರಬೇತಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಅನ್ನಪೂರ್ಣಮ್ಮ ಉಪಸ್ಥಿತರಿದ್ದರು. ಉಪನ್ಯಾಸಕ ರಮೇಶ ನಿರ್ವಹಿಸಿದರು. ಮಹಾಂತೇಶ ಅಂಗಡಿ ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.