ಬುಧವಾರ, ಆಗಸ್ಟ್ 4, 2021
27 °C

ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಗೇರಿ: ‘ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಮಾನವೀಯ ಮೌಲ್ಯಗಳನ್ನು ಕೂಡ ಜೀವನದಲ್ಲಿ ಮೈಗೂಡಿಸಿಕೊಂಡು ನಾಗರಿಕ ಸಮಾಜದಲ್ಲಿ ವಿನಯ, ಸಹಬಾಳ್ವೆಯಿಂದ ಬದುಕುವುದನ್ನು ಕಲಿಯಬೇಕು’ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಬಾಲಗಂಗಾಧರನಾಥ ಸ್ವಾಮೀಜಿ ಸಲಹೆ  ನೀಡಿದರು.ಕೆಂಗೇರಿ ಬಳಿಯ ಎಸ್‌ಜೆಬಿ ತಾಂತ್ರಿಕ ಸಂಸ್ಥೆಯಲ್ಲಿ ಮಂಗಳವಾರ ಆಯೋಜಿಸಿದ್ದ ‘ವರ್ಚಸ್ವ-11’ ಅಂತರ ಕಾಲೇಜು ತಾಂತ್ರಿಕ- ಸಾಂಸ್ಕೃತಿಕ ಉತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಸ್ಥಾನಮಾನ ಅಲಂಕರಿಸಿದ ನಂತರ ಯಾರನ್ನೂ ಸಂಕುಚಿತ ಮನೋಭಾವದಿಂದ ಕಾಣದೆ ಸಮಾನತೆಯಿಂದ ನೋಡಿದಾಗ ಕಲಿತದ್ದಕ್ಕೂ ಸಾರ್ಥಕತೆ ದೊರೆಯುತ್ತದೆ’ ಎಂದರು.ಗೃಹ ಸಚಿವ ಆರ್.ಅಶೋಕ ಮಾತನಾಡಿ, ‘ಆದಿಚುಂಚನಗಿರಿ ಸ್ವಾಮೀಜಿ ಮುಂದಾಲೋಚನೆಯಿಂದ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿದ್ದರಿಂದ ಎಲ್ಲ ವರ್ಗದ ಜನ ಶಿಕ್ಷಣ ಕಲಿತು ಮುಂದಿನ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

‘ಎಲ್ಲರಲ್ಲೂ ಒಂದು ಶಕ್ತಿ ಇರುತ್ತದೆ. ಅದನ್ನು ದುರುಪಯೋಗಪಡಿಸಿಕೊಳ್ಳದೇ ಸರಿಯಾದ ಮಾರ್ಗ ಆಯ್ಕೆ ಮಾಡಿಕೊಂಡು ಸಮಾಜದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಒಳ್ಳೆಯ ಸಂದೇಶವನ್ನು ದೇಶಕ್ಕೆ ಕೊಡುಗೆಯಾಗಿ ನೀಡಬೇಕು’ ಎಂದು ಮನವಿ ಮಾಡಿದರು.ಇದಕ್ಕೂ ಮುನ್ನ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಉತ್ಸವವನ್ನು ಉದ್ಘಾಟಿಸಿದರು. ಎಸ್‌ಜೆಬಿಐಟಿ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್‌ನಾಥ್ ಸ್ವಾಮೀಜಿ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಎಸ್.ದಯಾಶಂಕರ್, ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಉಪಾಧ್ಯಕ್ಷ ಡಾ. ಎನ್.ವೆಂಕಟರಮಣ, ನಟ ಗಣೇಶ್, ಚಿತ್ರ ನಿರ್ಮಾಪಕ ಕೆ.ಮಂಜು, ಟಿಸಿಎಸ್‌ನ ಇ.ಎಸ್.ಚಕ್ರವರ್ತಿ, ಪ್ರಾಂಶುಪಾಲ ಪುಟ್ಟರಾಜು ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.