ಮಾನವೀಯ ಸಂಬಂಧ ಉಳಿಸಿಕೊಳ್ಳಲು ಸಲಹೆ

7

ಮಾನವೀಯ ಸಂಬಂಧ ಉಳಿಸಿಕೊಳ್ಳಲು ಸಲಹೆ

Published:
Updated:

ಗೋಣಿಕೊಪ್ಪಲು: ಜಾತಿ, ಧರ್ಮಗಳ ಆಧಾರದ ಮೇಲೆ ಸಮಾಜ ವಿಘಟನೆಗೊಳ್ಳುತ್ತಿದ್ದು, ಪರಸ್ಪರ ವಿಶ್ವಾಸ ಇಲ್ಲದಂತಾಗಿದೆ. ಇಂತಹ ವಾತಾವರಣವನ್ನು ಬದಲಾಯಿಸುವ ನಿಟ್ಟಿನಲ್ಲಿ ಮಾನವೀಯ ಸಂಬಂಧಗಳನ್ನು ಕಾಪಾಡುವ ಅಗತ್ಯವಿದೆ ಎಂದು ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಜಗದಾತ್ಮಾನಂದ ಸ್ವಾಮೀಜಿ ಸಲಹೆ ನೀಡಿದರು.ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ ಕಿರುಗೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.ಸಮಾಜದಲ್ಲಿ ಹಿಂಸೆ, ಮೋಸ, ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪರಸ್ಪರರನ್ನು ಪ್ರೀತಿ, ವಿಶ್ವಾಸದಿಂದ ಕಾಣುವ ಮನೋಭಾವ ಕಡಿಮೆಯಾಗುತ್ತಿದೆ ಇಂತಹ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳ ಮೂಲಕ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೆಪ್ಪುಡೀರ ಪೊನ್ನಪ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.ಕಿರುಗುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀಟಾ ಪೂಣಚ್ಚ, ಉಪಾಧ್ಯಕ್ಷ ಕಿಶೋರ್, ಮುಖ್ಯ ಶಿಕ್ಷಕಿ ಮೀನಾಕ್ಷಿ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಂದ್ಯಂಡ ಹರೀಶ್, ಮುಖಂಡ ಕೆ.ರಾಜಪ್ಪ, ಶಿಬಿರದ ನಿರ್ದೇಶಕ ಡಾ.ಬಿ.ಎಸ್. ಪ್ರಭು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry